ಯಾದಗಿರಿ : ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹುಣಸಗಿ ತಾಲೂಕಿನ ನಾರಾಯಣಪೂರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ೪೨.೯೪೦ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಕಳೇದ ೧೫ ದಿನಗಳಿಂದ ಮಹಾರಾಷ್ಟçದಲ್ಲಿ ಸುರಿಯುತ್ತಿರುವ ಬಾರಿ ಮಳೇಗೆ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ, ಹೆಚ್ಚಿನ ನೀರು ಹೊರಬಿಡಲಾಗಿದ್ದು, ಪರಿಣಾಮ ಬಸವಸಾಗರ ಜಲಾಶಯಕ್ಕೆ ೫೦ ಸಾವಿರ ಕ್ಯೂಸೆಕ್ ನೀರು ಒಳಹರಿವು ಹೆಚ್ಚಾಗಿದೆ.
ಜಲಾಶಯ ಭರ್ತಿಯಾಗಿದ್ದು, ೩೩.೩೩ ಟಿ.ಎಂ.ಸಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯ ಇರುವ ಜಲಾಶಯದಲ್ಲಿ ಸಧ್ಯ ೨೨.೯೦ ಟಿ.ಎಂ.ಸಿ ಸಂಗ್ರಹವಿದೆ, ಅಧಿಕಾರಿಗಳು ನೀರಿನ ಸಂಗ್ರಹ ಮಟ್ಟವನ್ನು ಕಾಯ್ದುಕೊಂಡು ನೀರನ್ನು ನದಿಗೆ ಬಿಟ್ಟಿದ್ದಾರೆ.
ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಲಿದೆ, ಜನರು ಎಚ್ಚರಿಕೆವಹಿಸಿ ಯಾರು ನದಿ ತೀರಕ್ಕೆ ತೆರಳಬೇಡಿ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರೀಯಾ ಆರ್. ತಿಳಿಸಿದ್ದಾರೆ.
Check Also
ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ
Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …