ಬೆಂಗಳೂರು; ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ವಲಯಕ್ಕೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿ ಹೋಟೆಲ್, ರೆಸಾರ್ಟ್ , ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳಿಗೆ ಆಸ್ತಿತೆರಿಗೆ , ವಿದ್ಯುತ್ ಶುಲ್ಕ ಹಾಗೂ ಅಬಕಾರಿ ಶುಲ್ಕದಲ್ಲಿ ಹಲವಾರು ರಿಯಾಯಿತಿಗಳನ್ನು ನೀಡಿ ಆದೇಶ ಹೊರಡಿಸಿದೆ.
ಹೋಟೆಲ್ ,ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳಿಗೆ ಪ್ರಸಕ್ತ ಸಾಲಿನಲ್ಲಿ (2021 – 2022 ) ಶೇಕಡ 50ರಷ್ಟು ಆಸ್ತಿ ತೆರಿಗೆ ಶುಲ್ಕ ವಿನಾಯಿತಿ .
ಹೋಟೆಲ್ , ರೆಸಾರ್ಟ್ ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳ ಪ್ರಸಕ್ತ ಸಾಲಿನ ಏಪ್ರಿಲ್ ಮೇ ಜೂನ್ ತಿಂಗಳ ವಿದ್ಯುಚ್ಛಕ್ತಿ ಶುಲ್ಕ ಮನ್ನಾ .
ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇಕಡಾ 50ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇಕಡಾ 50ರಷ್ಟು ಮೊತ್ತವನ್ನು ಈ ವರ್ಷದ ಡಿಸೆಂಬರ್ 31 ರೊಳಗೆ ಪಾವತಿಸಲು 6 ತಿಂಗಳ ಕಾಲಾವಧಿ ನೀಡಲಾಗಿದೆ .
ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿ ಗೆ 5000 ರೂಪಾಯಿಗಳನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡ ಲಾಗುವುದು .
ರಾಜ್ಯ ಸರ್ಕಾರ ವಿವಿಧ ಪ್ರವಾಸೋದ್ಯಮ ಉದ್ದಿಮೆದಾರರಿಗೆ ನೀಡಿರುವ ಪುನಶ್ಚೇತನ ಸಹಾಯವು ಸಂಕಷ್ಟ ಕಾಲದಿಂದ ಹೊರಬಂದು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ .
ಸರ್ಕಾರದ ಸಹಾಯ ಹಸ್ತ ದಿಂದ ಆತಿಥ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರವು ಚೇತರಿಕೆ ಕಾಣಲು ಸಹಕಾರಿಯಾಗಿದ್ದು ಪ್ರವಾಸೋದ್ಯಮ ಕ್ಷೇತ್ರವನ್ನೇ ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ನೌಕರರಿಗೆ ಹಾಗೂ ಉದ್ಯೋಗಿಗಳಿಗೆ ಪುನರ್ಜನ್ಮ ನೀಡಿದಂತಾಗಿದೆ
ಈ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಕಾರಿಯಾಗಲಿದೆ ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಆರ್ಥಿಕ ವಹಿವಾಟು ಹೆಚ್ಚಾಗಿ ರಾಜ್ಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಸಹ ರಾಜ್ಯ ಪ್ರವಾಸೋದ್ಯಮ ಸೊಸೈಟಿ ಪದಾಧಿಕಾರಿಗಳು ಹೇಳಿದ್ದಾರೆ ..