Breaking News

ಇಂಧನ ಬೆಳೆ ಇಳಿಸಲು ಜೈಭೀಮ ಯುವಶಕ್ತಿ ಸೇನಾ ಆಗ್ರಹ

Spread the love

ಹುಬ್ಬಳ್ಳಿ: ಕೋವಿಡ್‌ನಿಂದಾಗಿ ಜನಸಾಮಾನ್ಯರ ಬದುಕು ಅತೀವ ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ಹಾಗೂ ದಿನಬಳಕೆಯ ಆಹಾರ ಪದಾರ್ಥಗಳ ಬೆಲೆ ವಿಪರೀತವಾಗಿ ಏರಿಕೆಯಾಗಿವೆ. ಬೆಲೆ ಏರಿಕೆಗೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಜೈಭೀಮ ಯುವಶಕ್ತಿ ಸೇನಾ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್‌ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್‌ ಅವಧಿಯಲ್ಲಿ ಬಹಳಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ದುಡಿಯುವ ಶಕ್ತಿ ಇದ್ದರೂ ಆ ಕೈಗಳಿಗೆ ಕೆಲಸ ಸಿಗುತ್ತಿಲ್ಲ. ಹೀಗಾದರೆ ಬಡವರು ಹಾಗೂ ಮಧ್ಯಮ ವರ್ಗದ ಜನ ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ. ನಿತ್ಯ 30, 40 ಪೈಸೆ ಹೆಚ್ಚಳವಾಗುತ್ತಿರುವ ಪೆಟ್ರೋಲ್ ಬೆಲೆ ಈಗ ಒಂದು ಲೀಟರ್‌ಗೆ ₹100 ಆಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ನಿರಂತರ ಹೋರಾಟ ನಡೆಸಲಾಗುವುದು ಎಂದು ಪದಾಧಿಕಾರಿಗಳು ಎಚ್ಚರಿಸಿದ್ದಾರೆ.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ ಎಂ. ಗುಂಟ್ರಾಳ, ಉಪಾಧ್ಯಕ್ಷ ಸುನೀಲ ಕುರ್ಡೇಕರ, ಪದಾಧಿಕಾರಿಗಳಾದ ರಮೇಶ ಹಿರೇಮನಿ, ವಿಜಯ ಮಾದರ, ಸಂತೋಷ ನಿರ್ಮನಿ, ಪರಶುರಾಮ, ಶಂಕರ ಕಟ್ಟಿಮನಿ, ಅಶೋಕ ಮಲ್ಲಣ್ಣನವರ ಇದ್ದರು.


Spread the love

About gcsteam

    Check Also

    ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರಿಂದ ನಾಳೆ ಐಐಟಿಯಲ್ಲಿನ ಜ್ಞಾನ ಸಂಪನ್ಮೂಲ ಮತ್ತು ದತ್ತಾಂಶ ಕೇಂದ್ರ ಉದ್ಘಾಟನೆ

    Spread the loveಧಾರವಾಡ ಫೆ.29: ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್‌ಕರ್ ಅವರು ನಾಳೆ ಮಾರ್ಚ್ 1, …

    Leave a Reply