Breaking News

ರಮೇಶ್‌ ಜಾರಕಿಹೊಳಿ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ

Spread the love

ಬೆಳಗಾವಿ: ಮರಳಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಇಂದು ವಿಶೇಷ ವಿಮಾನದ ಮೂಲಕ ಮೈಸೂರಿನ ಸುತ್ತೂರು‌ ಶಾಖಾ ಮಠಕ್ಕೆ ತೆರಳಿದರು. ಗೋಕಾಕನಲ್ಲಿರುವ ಗೃಹ ಕಚೇರಿಯಿಂದ‌ ಹೊರಬಂದ ಜಾರಕಿಹೊಳಿ‌ ನೇರವಾಗಿ ಸಹೋದರ ಲಖನ್ ಜಾರಕಿಹೊಳಿ‌ ಮನೆಯಲ್ಲಿ ಕೆಲಹೊತ್ತು ಸಭೆ ನಡೆಸಿದರು. ಅಲ್ಲಿಂದ ಲಖನ್, ಅಳಿಯ ಅಂಬಿರಾವ್ ಪಾಟೀಲ್ ಅವರನ್ನು ಕರೆದುಕೊಂಡು ರಸ್ತೆ ಮಾರ್ಗದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನಕ್ಕೆ ಬಂದಿಳಿದರು.ಸುತ್ತೂರು ಮಠಕ್ಕೆ ತೆರಳಿದ ಮಾಜಿ ಸಚಿವ ರಮೇಶ ಜಾರಕಿಹೊಳಿ‌ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಲು ನಿರಾಕರಿಸಿದ ಅವರು, ವಾಪಸ್ ಬಂದು ಎಲ್ಲವನ್ನೂ ಮಾತನಾಡುತ್ತೇನೆ ಎಂದು ಹೇಳಿದರು. ಬಳಿಕ ಸಹೋದರ ಲಖನ್ ಜಾರಕಿಹೊಳಿ‌ ‌ಮಾತನಾಡಿ, ಇವತ್ತು ಶ್ರೀಗಳನ್ನು ಭೇಟಿಯಾಗುತ್ತೇವೆ. ನಾಳೆ ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೋಡೋಣ. ಆ ಬಗ್ಗೆ ಹೇಳ್ತೀವಿ. ಅವರೇ ಮಾತಾಡ್ತಾರೆ ಎಂದರು.


Spread the love

About Karnataka Junction

    Check Also

    ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಭಾರೀ ಗುಡುಗು ಸಿಡಿಲು ಮಿಶ್ರಿತ ಮಳೆ

    Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ವಿವಿಧೆಡೆ ಶನಿವಾರ ಸಂಜೆ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ …

    Leave a Reply

    error: Content is protected !!