ಹುಬ್ಬಳ್ಳಿ- ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಂದ್ ಆಗಿದ್ದ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಗರದ ಯಲ್ಲಾಪುರ ಓಣಿಯ ಸಣ್ಣಕೇರಿಯಲ್ಲಿ ನಡೆದಿದೆ.
ಆರೀಫ್ ಡಿಜಿಟಲ್ ಸೇವಾ ಕೇಂದ್ರದಲ್ಲಿಯೇ ಬೆಂಕಿ ಹತ್ತಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ ಇನ್ನಿತರ ವಸ್ತುಗಳು ಹಾನಿಯಾಗಿವೆ. ಇನ್ನು ಅಂಗಡಿಗೆ ಬೆಂಕಿ ತಲುಗಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸುವ ಕೆಲಸ ಮಾಡಿದರು. ಘಟನಾ ಸ್ಥಳಕ್ಕೆ ಬೆಂಡಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
