ಬೆಳಗಾವಿ : ನಮ್ಮಲ್ಲಿ ಯಾರೇ ಸಿಎಂ ಆದರೂ ಹೃದಯಪೂರ್ವಕವಾಗಿ ಸ್ವೀಕಾರ ಮಾಡುತ್ತೇವೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ನಮ್ಮಲ್ಲಿ ಯಾರೇ ಸಿಎಂ ಆದರೂ ಹೃದಯಪೂರ್ವಕವಾಗಿ ಸ್ವೀಕಾರ ಮಾಡುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಮುಂದಿನ ಸಿಎಂ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್..2023ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ರಾಜ್ಯಕ್ಕೆ ಒಳ್ಳೆಯದಾಗಬೇಕಂದ್ರೆ ಕಾಂಗ್ರೆಸ್ ಸರ್ಕಾರ ಬರಬೇಕು. ಕಾಂಗ್ರೆಸ್ನವರು ಮುಖ್ಯಮಂತ್ರಿ ಆಗಬೇಕೆಂಬುದು ನನ್ನದೂ ಕೂಡ ಬಯಕೆ ಇದೆ. ಮುಖ್ಯಮಂತ್ರಿ ಯಾರಾಗ್ತಾರೆ ಅಂತ ಹೈಕಮಾಂಡ್‌ನವರು ನಿರ್ಧಾರ ಮಾಡುತ್ತಾರೆ. ಹೈಕಮಾಂಡ್ ಏನು ಹೇಳುತ್ತೋ ಅದನ್ನು ನಾವು ಕೇಳುತ್ತೇವೆ ಎಂದಿದ್ದಾರೆ.ಕಾಂಗ್ರೆಸ್ ಪಕ್ಷ ತೊರೆದವರು ಮರಳಿದರೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯೂ ಅಲ್ಲ, ವಿರೋಧ ಪಕ್ಷದ ನಾಯಕಿಯೂ ಅಲ್ಲ. ಬಹಳಷ್ಟು ಹಿರಿಯ ನಾಯಕರು ಮುಖಂಡರಿದ್ದಾರೆ. ಇದನ್ನೆಲ್ಲ ಅವರು ವಿಚಾರ ಮಾಡುತ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Check Also
ಅ,27 ರಂದು ಯಕ್ಷಲೋಕ ವಿಜಯ ಪ್ರಸಂಗ ಪ್ರದರ್ಶನ
Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಬಂಟ ಹವ್ಯಾಸಿ ಕಲಾವಿದರ ಸಂಘ, ಕಲಾರಂಗದ ವತಿಯಿಂದ ಅ. 27ರಂದು ಸಂಜೆ 4 ಗಂಟೆಗೆ …