Breaking News

ಹುಬ್ಬಳ್ಳಿ ಮಹಾನಗರ ಪಾಲಿಕೆಯಲ್ಲಿ ಕೋವೀಡ್ ನಿಯಂತ್ರಣ ಕುರಿತು ಪಾಲಿಕೆ ಅಧಿಕಾರಿಗಳ ಜೊತೆಗೆ ಶಾಸಕ ಅಬ್ಬಯ್ಯಾ ಪ್ರಸಾದ್ ಸಭೆ

Spread the love

ಹುಬ್ಬಳ್ಳಿ – ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ
ಮತಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್- 19 ಸಮರ್ಪಕ ನಿರ್ವಹಣೆ ಕುರಿತು ಪಾಲಿಕೆ ಸಭಾಂಗಣದಲ್ಲಿ ಹುಧಾ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.
ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಕೊರೋನಾ ವೈರಸ್ ಹರಡುವಿಕೆ ತಡೆಗಾಗಿ ಕ್ಷೇತ್ರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಅಲ್ಲದೇ, ಈವರೆಗೆ ಕೈಗೊಂಡ ಕೆಲಸ- ಕಾರ್ಯಗಳ ಬಗ್ಗೆ ವಾರ್ಡುವಾರು ವರದಿಯನ್ನು 2 ದಿನಗಳೊಳಗಾಗಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು.
ಕೊರೋನಾ ತಡೆಗಾಗಿ ಕೈಗೊಳ್ಳುವ ಕ್ರಮಗಳು, ಗಟಾರ ಸ್ವಚ್ಛತೆ, ಸ್ಯಾನಿಟೈಸಿಂಗ್, ಫಾಗಿಂಗ್ ಇತ್ಯಾದಿ ಕಾರ್ಯಗಳ ಬಗ್ಗೆ ಪ್ರತಿದಿನ ವ್ಯಾಟ್ಸಪ್ ಮೂಲಕ ಮಾಹಿತಿ ನೀಡುವಂತೆ ಸೂಚಿಸಿ, ಮಳೆಗಾಲ ಆರಂಭವಾಗುತ್ತಿದ್ದು, ನಾಲಾದಲ್ಲಿನ ಹೂಳು ತೆಗೆದು ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಲಾಯಿತು.


Spread the love

About Karnataka Junction

[ajax_load_more]

Check Also

ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ

Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …

Leave a Reply

error: Content is protected !!