ಹುಬ್ಬಳ್ಳಿ; ನಗರದ ಕೇಶ್ವಾಪುರದ ಮಯೂರ ಎಸ್ಟೇಟ್ ನಲ್ಲಿನ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರ ಗೃಹ ಕಚೇರಿಯಲ್ಲಿ ಭಾನುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಮತ್ತು ಧಾರವಾಡ ಗ್ರಾಮಾಂತರ ಯುವ ಮೋರ್ಚಾ ತಂಡದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಂತಾದವರು ಉಪಸ್ಥಿತರಿದ್ದರು.
