https://youtu.be/f3EZ4YNuaEM
ಮೈಸೂರು: ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಬಗ್ಗೆ ಚರ್ಚೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದೀಗ ಈ ಕುರಿತಂತೆ ಮಾಜಿ ಗೃಹ ಸಚಿವ, ಹಾಲಿ ಶಾಸಕ ಎಂ ಬಿ ಪಾಟೀಲ್ ಸಹ ಪ್ರತಿಕ್ರಿಯಿಸಿದ್ದು, ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದು ಸುಳ್ಳು ಎಂದಿದ್ದಾರೆ.
ಶಾಸಕ ಎಂ ಬಿ ಪಾಟೀಲ್ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅತಿ ದೊಡ್ಡ ನಾಯಕರು. ಅದರಲ್ಲಿ ಅನುಮಾನವಿಲ್ಲ. ಅದರ ನಂತರ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ನಲ್ಲಿ ನಾನು, ಶರಣಪ್ರಕಾರ್ಶ್ ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರಿದ್ದೇವೆ. ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಯತ್ನಾಳ್, ವಿ. ಸೋಮಣ್ಣ, ಅರವಿಂದ್ ಬೆಲ್ಲದ್ ಸೇರಿ ಅನೇಕರಿದ್ದಾರೆ. ಎಲ್ಲರೂ ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ ಎಂದರು.ನಾವೇ ಮುಖ್ಯಮಂತ್ರಿ ಅಂತ ಸೆಲ್ಫ್ ಡಿಕ್ಲರೇಶನ್ ಸರಿಯಲ್ಲ ನಾವೇ ಮುಖ್ಯಮಂತ್ರಿ ಅಂತ ಸೆಲ್ಫ್ ಡಿಕ್ಲೇರ್ ಮಾಡಿಕೊಳ್ಳುವುದು ಸರಿಯಲ್ಲ. ಡಿಕ್ಲೇರ್ ಮಾಡಿಕೊಂಡವರೆಲ್ಲ ಸಿಎಂ ಆಗುವುದಿಲ್ಲ. ಯಾರು ಸಿಎಂ ಆಗಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು ಎಂದು ಪಾಟೀಲ್ ತಿಳಿಸಿದರು.ಕಾಂಗ್ರೆಸ್ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರವಾಗಿ ಮಾತನಾಡಿ, ಕೆಲವರು ಅಭಿಮಾನದಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದರು.ಮುಂದಿನ ಸಿಎಂ ಚರ್ಚೆ ಅಪ್ರಸ್ತುತ:ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ, ಕಾಂಗ್ರೆಸ್ ಇತಿಹಾಸದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಉದಾಹರಣೆ ಇಲ್ಲ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಚುನಾವಣೆಗೂ ಮುಂಚಿತವಾಗಿ ಸಿಎಂ ಅಭ್ಯರ್ಥಿ ಹೆಸರು ಹೇಳಿಲ್ಲ. ಹೀಗಾಗಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ಅಪ್ರಸ್ತುತ ಎಂದು ಎಂದು ಎಂ ಬಿ ಪಾಟೀಲ್ ಹೇಳಿದ್ರು.
ಯಾರೋ ಮಾತನಾಡಿದ ವಿಚಾರಕ್ಕೆ ಹೆಚ್ಚು ಬೆಲೆ ಕೊಡಬೇಕಿಲ್ಲ:ರಾಜ್ಯದಲ್ಲಿ150ಸ್ಥಾನ ಗೆಲ್ಲೋದು ನಮ್ಮ ಆದ್ಯತೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ. ಗುರಿ ಮುಟ್ಟಿದ ಬಳಿಕ ಸಿಎಲ್ಪಿ ಸಭೆ ನಡೆಯುತ್ತದೆ. ಬಳಿಕ ಹೈಕಮಾಂಡ್ ಮುಖ್ಯಮಂತ್ರಿ ಯಾರಾಗಬೇಕೆಂದು ಸೂಚನೆ ಕೊಡುತ್ತಾರೆ. ಹೀಗಾಗಿ ಯಾರೋ ಮಾತನಾಡಿದ ವಿಚಾರಕ್ಕೆ ಹೆಚ್ಚು ಬೆಲೆ ಕೊಡಬೇಕಿಲ್ಲ ಎಂದರು.ಸಿಎಂ ಸ್ಥಾನದ ಆಕಾಂಕ್ಷಿ:ತಾವು ಮುಖ್ಯಮಂತ್ರಿ ಅಭ್ಯರ್ಥಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಿಶ್ಚಿತವಾಗಿ ನಾನೂ ಕೂಡ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಆಸೆ ವ್ಯಕ್ತಪಡಿಸಿದರು.ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಸಾಮಾನ್ಯ:ಎಲ್ಲರಲ್ಲಿಯೂ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ದುರಾಸೆ ಇರಬಾರದು. ನಮ್ಮ ಗುರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದು. ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇದೆ. ನಾನು ಪಕ್ಷದ ಶಿಸ್ತು ಪಾಲನೆ ಮಾಡುತ್ತೇನೆ. ಮುಖ್ಯಮಂತ್ರಿ ಚರ್ಚೆ ಬೇಡ ಎಂದು ಸುರ್ಜೇವಾಲ ಸೂಚನೆ ನೀಡಿದ್ದಾರೆ. ಅವರ ಸೂಚನೆಯನ್ನು ನಾನು ಪಾಲನೆ ಮಾಡುತ್ತೇನೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಸಾಮೂಹಿಕ ನಾಯಕತ್ವದ ಮೂಲಕ ನಾವು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.