ವಿರೋಧಿ ಬಣಗಳ ತಂತ್ತ ವರ್ಕೌಟ್ ಆಯಿತಾ?
ಬೆಂಗಳೂರು: ಹೈಕಮಾಂಡ್ ವಿಶ್ವಾಸವಿಟ್ಟು ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ಬಗ್ಗೆ ಭಾನುವಾರ ಮಾತನಾಡಿದ ಸಿಎಂ ಯಡಿಯೂರಪ್ಪ, “ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ ಅಲ್ಲಿಯವರೆಗೂ ನಾನು ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇದೆ” ಎಂದಿದ್ದು, ಮೊದಲ ಬಾರಿ ರಾಜೀನಾಮೆ ವಿಷಯ ಪ್ರಸ್ತಾಪಿಸಿದ್ದಾರೆ ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಗೆ ಗ್ರಾಸವಾಗಿದೆ.