ಬೆಂಗಳೂರು: ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ, ತಜ್ಞರ ಸಮಿತಿ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಆರೋಗ್ಯ ಸಚಿವ ಸುಧಾಕರ್ ಮತ್ತು ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡುವಿನ ಪ್ರತಿಷ್ಠೆಗೆ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡಲಾಗುತ್ತಿದೆ ಎನ್ನುವ ಮಾತುಗಳು ಹರಿದಾಡುತ್ತಿದ್ದಂತೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ಸ್ಪಷ್ಟೀಕರಣದ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಸಿಎಂ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷಾ ದಿನಾಂಕ ಪ್ರಕಟವಾದ ನಂತರ ಸಚಿವ ಸುಧಾಕರ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಪರೀಕ್ಷಾ ದಿನಾಂಕ ಕುರಿತು ಸುರೇಶ್ ಕುಮಾರ್ ತಮಗೆ ಯಾವುದೇ ಮಾಹಿತಿ ನೀಡಿರಲಿಲ್ಲ, ತಜ್ಞರ ಸಮಿತಿ ವರದಿಯಲ್ಲಿ ಪರೀಕ್ಷೆ ಬಗ್ಗೆ ಹೇಳಿಯೇ ಇಲ್ಲ. ಅಲ್ಲದೆ ಆರೋಗ್ಯ ಇಲಾಖೆ ಅನುಮತಿ ಪಡೆದಿಲ್ಲ, ಮಾಧ್ಯಮಗಳ ಮೂಲಕವೇ ನನಗೆ ಮಾಹಿತಿ ಗೊತ್ತಾಗಿದ್ದು, ಈ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದಿದ್ದರು.ಇದಕ್ಕೆ ವ್ಯತಿರಿಕ್ತವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ ಚರ್ಚಿಸಿಯೇ ದಿನಾಂಕ ಪ್ರಕಟ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದರು. ಇದು ಉಭಯ ಸಚಿವರ ನಡುವೆ ಹೊಂದಾಣಿಕೆ ಕೊರತೆಯ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಇಬ್ಬರು ಸಚಿವರ ನಡುವಣ ಪ್ರತಿಷ್ಠೆಗೆ ಮಕ್ಕಳ ಜೀವದ ಜೊತೆ ಆಟವಾಡಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.⊄
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …