ಧಾರವಾಡ;ರಾಜ್ಯ ಸರಕಾರದ ಆದೇಶದಂತೆ ಜೂನ 21, 2021ರಿಂದ ಜುಲೈ 5,2021ರ ವರೆಗೆ ಜಿಲ್ಲೆಯಲ್ಲಿ ಲಾಕ್ ಡೌನ್, ನೈಟ್ ಕರ್ಪ್ಯೂ ಮತ್ತು ಶನಿವಾರ, ರವಿವಾರದಂದು ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಅದು ಮುಂದುವರಿದಿದೆ. ಆದ್ದರಿಂದ ಇಂದು(ಜು.2) ಸಂಜೆ 7 ಗಂಟೆಯಿಂದ ಜು.5 ರ ಬೆಳಿಗ್ಗೆ 5 ಗಂಟೆವರೆಗೆ (ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ವರೆಗೆ) ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ಪ್ರಭಾರ ಜಿಲ್ಲಾಧಿಕಾರಿಗಳು ಆಗಿರುವ ಜಿ.ಪಂ.ಸಿಇಓ ಡಾ.ಬಿ.ಸುಶೀಲಾ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸರಕಾರದಿಂದ ಮುಂದಿನ ಆದೇಶ ಬರುವವರೆಗೆ ಜಿಲ್ಲೆಯಲ್ಲಿ ಜೂನ್ 20, 2021 ರಂದು ಹೊರಡಿಸಿರುವ ಆದೇಶಜಾರಿಯಲ್ಲಿರುತ್ತದೆ.
ಸಾರ್ವಜನಿಕರು ಕರ್ಪ್ಯೂ ಆದೇಶ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತಗೊಳಿಸಲು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಅವರು ತಿಳಿಸಿದ್ದಾರೆ.
