Breaking News

ಡಿಸಿಎಂ ಲಕ್ಷಣ್​ ಸವದಿ ಪುತ್ರನ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಸವಾರ ಸಾವು- ಅಪಘಾತ ನಡೆದಾಗ ಡಿಸಿಎಂ ಪುತ್ರ ಸ್ಥಳದಿಂದ ಪರಾರಿಯಾಗಲು ಯತ್ನ

Spread the love

ಬಾಗಲಕೋಟೆ: ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಅವರ ಮಗನ ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್ ಬಳಿ ಸಂಭವಿಸಿದೆ.
ಡಿಸಿಎಂ ಲಕ್ಷ್ಮಣ್​ ಸವದಿಯವರ ಹಿರಿಯ ಮಗ ಚಿದಾನಂದ ಸವದಿ, ರಾಷ್ಟ್ರೀಯ ಹೆದ್ದಾರಿ 50 ರ ಕೂಡಲ ಸಂಗಮ ಕ್ರಾಸ್ ಬಳಿ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಕೂಡಲೆಪ್ಪ ಬೋಳಿ (58) ಎಂಬಾತನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮೃತ ಬೈಕ್​ ಸವಾರ ಕೂಡಲೆಪ್ಪ ಬೋಳಿ ಬಾಗಲಕೋಟೆ ತಾಲೂಕು ಚಿಕ್ಕಹಂಡರಗಲ್ ಗ್ರಾಮದ ನಿವಾಸಿಯಾಗಿದ್ದಾರೆ. ಇವರು ಹೊಲಕ್ಕೆ ಹೋಗಿ ವಾಪಸ್ ಬರುವಾಗ ಚಿದಾನಂದ ಸವದಿಯವರ ಕೆಎ-22 ಎಮ್​ ಸಿ 5151 ನಂಬರಿನ ಕಾರು ಡಿಕ್ಕಿಯಾಗಿದೆ.ನಂಬರ್ ಪ್ಲೇಟ್ ಜಖಂ ಮಾಡಿ ಪರಾರಿಯಾಗಲು ಯತ್ನಅಪಘಾತ ಸಂಭವಿಸಿದಾಗ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆ ಸೇರಿಸುವ ಬದಲು, ಚಿದಾನಂದ ಸವದಿ ತಮ್ಮ ಕಾರಿನ ನಂಬರ್​ ಪ್ಲೇಟ್ ಜಖಂಗೊಳಿಸಿ ದಾಖಲೆ ಸಮೇತ ಇನ್ನೊಂದು ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಆದರೆ, ಸ್ಥಳೀಯರು ಅವರನ್ನು ಹೋಗಲು ಬಿಡದೆ ಹಿಡಿದಿಟ್ಟಿದ್ದರು. ಬಳಿಕ ಸ್ಥಳಕ್ಕೆ ಹುನಗುಂದ ಪೊಲೀಸರು ಆಗಮಿಸಿ ಚಿದಾನಂದ ಸವದಿಯನ್ನು ಬಿಡಿಸಿ ಕಳಿಸಿದ್ದಾರೆ ಎನ್ನಲಾಗ್ತಿದೆ.
ಅಪಘಾತ ನಡೆದಾಗ ಚಿದಾನಂದ ಸವದಿ ನಾನು ಡಿಸಿಎಂ ಲಕ್ಷಣ್​ ಸವದಿ ಮಗ ಎಂದು ಸ್ಥಳೀಯರು ಮತ್ತು ಮೃತನ ಸಂಬಂಧಿಕರಿಗೆ ಧಮ್ಕಿ ಹಾಕಿರುವುದಾಗಿ ಆರೋಪಿಸಲಾಗಿದೆ. ಅಪಘಾತ ನಡೆದಾಗ ಚಿದಾನಂದ ಸವದಿಯವರೇ ಕಾರು ಚಲಾಯಿಸುತ್ತಿದ್ದರು ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ.ಒಟ್ಟು 12 ಜನ ಎರಡು ಕಾರುಗಳಲ್ಲಿ ಪ್ರವಾಸಕ್ಕೆ ಹೋಗಿದ್ದರು. ಹಂಪಿ, ಹೊಸಪೇಟೆ, ಕೊಪ್ಪಳ, ಅಂಜನಾದ್ರಿ ಬೆಟ್ಟ ಸೇರಿದಂತೆ ರಾಜ್ಯದ ವಿವಿಧೆಡೆಗೆ ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.


Spread the love

About Karnataka Junction

[ajax_load_more]

Check Also

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಶಶಿಕುಮಾರ್ ನೇಮಕ

Spread the loveಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. …

Leave a Reply

error: Content is protected !!