ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್ ಗೆಹ್ಲೋಟ್ ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದ್ದು ಅವರ ಸ್ಥಾನಕ್ಕೆ ಗೆಹ್ಲೋಟ್ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಕೇಂದ್ರ ಸಂಪುಟ ಪುನರ್‌ರಚನೆ ವೇಳೆ ಗೆಹ್ಲೋಟ್ ಅವರನ್ನು ಕೈಬಿಡಲಿದ್ದು, ಅವರಿಗೆ ರಾಜ್ಯಪಾಲ ಹುದ್ದೆ ನೀಡಲು ನಿರ್ಧರಿಸಲಾಗಿದೆ.
ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಗೆಹ್ಲೋಟ್, ಈಗ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಅದೇ ರೀತಿ ಇದೇ ವೇಳೆ ಎಂಟು ರಾಜ್ಯಗಳಿಗೆ ನೂತತ ರಾಜ್ಯಪಾಲರ ನೇಮಕ ಮಾಡಲಾಗಿದೆ.
