ಕಲಘಟಗಿ: ಬಮ್ಮಿಗಟ್ಟಿ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿ.ಎಸ್.ಉಳ್ಳಾಗಡ್ಡಿ ಹೇಳಿದರು.
ತಾಲೂಕಿನ ಬಮ್ಮಿಗಟ್ಟಿ ಗ್ರಾಮದಲ್ಲಿ ನಡೆದ ಒಂದನೇಯ ವಾರ್ಡ್ ಸಭೆಯಲ್ಲಿ ಮಾತನಾಡಿದರು.
೫೯ ಲಕ್ಷ ರೂ. ಅನುದಾನದಲ್ಲಿ ಚರಂಡಿ ನಿರ್ಮಾಣ, ಕೆರೆ ಹೊಳೆತ್ತುವುದು, ರಸ್ತೆ ಅಭಿವೃದ್ಧಿ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.
ನರೇಗಾದಡಿ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಆದ್ಯತೆ ಮೇರೆಗೆ ವೈಯಕ್ತಿಕ ಕಾಮಗಾರಿ ನೀಡಲಾಗುವುದು ಎಂದರು.
ಗ್ರಾಮದ ಅಭಿವೃದ್ಧಿಗೆ ಪೂರಕವಾದ ಸಲಹೆಗಳನ್ನು ಗ್ರಾಮಸ್ಥರು ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಸುಭದ್ರ್ರಾ ಪೂಜಾರ, ಉಪಾಧ್ಯಕ್ಷ ವೀರಭದ್ರಪ್ಪ ಮಲಕನಕೊಪ್ಪ, ರತ್ನವ್ವ ಕುರ್ಡಿಕೇರಿ, ಮಂಜುನಾಥ ಕಾಮಧೇನು, ಸುರೇಶ ರಾಯ್ಕರ, ಕಾರ್ಯದರ್ಶಿ ಬಿ.ವೈ.ಪಲ್ಲೇದ, ಬೂದಪ್ಪ ಕಾಮಧೇನು, ರಮೇಶ ಕಡ್ಲಿ, ಫಕ್ಕೀರಯ್ಯ ಚಿಕ್ಕಮಠ ಇದ್ದರು.
ಗ್ರಾಮಸ್ಥರಿಂದ ತರಾಟೆ
ಗ್ರಾಮದಲ್ಲಿ ಅಪೌಷ್ಟಿಕತೆಯಿಂದ ಬಳತ್ತಿರುವ ಮಕ್ಕಳು ತನಗೆ ಸಂಬಂಧಿಸಿದ ವಿಷಯವಲ್ಲ ಎಂದು ಪಿಡಿಒ ನೀಡಿದ ಹೇಳಿಕೆಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಕೊರೋನಾ ಸಂಭಾವ್ಯ ಮೂರನೇ ಅಲೆ ಹಿನ್ನೆಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಮುಂಜಾಗ್ರತ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಒತ್ತಾಯಿಸಿದರು.
Check Also
ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ*
Spread the loveಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ …