ಹುಬ್ಬಳ್ಳಿ: ‘ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಂಬಂಧ ವೀಕ್ಷಕರ ನೇಮಕ ಮಾಡಲಾಗಿದ್ದು ಧಾರವಾಡ ಜಿಲ್ಲೆಯ ಹಿರಿಯ ಮುಖಂಡೆ ಪ್ರಭಾವತಿ ವಡ್ಡಿನ ಅವರನ್ನು ಬಾಗಲಕೋಟಿ ಜಿಲ್ಲೆಯ ವೀಕ್ಷಕರಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಆದೇಶ ಹೊರಡಿಸಿದ್ದು, ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುವ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
