Breaking News

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ಎಸಿಬಿ ದಾಳಿ

Spread the love

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮೇರೆಗೆ ರಾಜ್ಯದ ವಿವಿಧೆಡೆ ಒಂಬತ್ತು ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಏಕಕಾಲದಲ್ಲಿ ದಾಳಿ ನಡೆಸಿದೆ.
ಬೆಂಗಳೂರು, ಕೋಲಾರ, ಮಂಗಳೂರು ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್ ನೀಡಿದೆ. ಅಧಿಕಾರಿಗಳ ಮನೆ,ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ ಎಸಿಬಿ ತಂಡ ಪರಿಶೀಲನೆಯಲ್ಲಿ ತೊಡಗಿವೆ.ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ಮಾಹಿತಿ ಈ ರೀತಿ ಇದ್ದು ಜಿ.ಶ್ರೀಧರ್, ಕಾರ್ಯಪಾಲಕ ಅಭಿಯಂತರ,‌ ನಗರಾಭಿವೃದ್ಧಿ ವಿಭಾಗ ಜಿಲ್ಲಾಧಿಕಾರಿ ಕಚೇರಿ ಮಂಗಳೂರು, ಕೃಷ್ಣ ಎಸ್​, ಹೆಬ್ಸೂರು, ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಉಡುಪಿ,ಆರ್.ಪಿ ಕುಲಕರ್ಣಿ, ಸಿಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ, ಹೆಚ್.ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ, ಮಾಲೂರು ನಗರ ಯೋಜನಾ ಪ್ರಾಧಿಕಾರ ಕೋಲಾರ, ಸುರೇಶ್ ಮೋಹ್ರೆ, ಜೆಇ ಪಿಆರ್​ಇ ಬೀದರ್, ವೆಂಕಟೇಶ್ ಟಿ, ಡಿಸಿಎಫ್​ ಸಾಮಾಜಿಕ ಅರಣ್ಯ ಮಂಡ್ಯ, ಸಿದ್ದರಾಮ ಮಲ್ಲಿಕಾರ್ಜುನ್, ಎಇಇ, ಹೆಸ್ಕಾಂ ವಿಜಯಪುರ
,ಎ.ಕೃಷ್ಣಮೂರ್ತಿ, ಹಿರಿಯ ಮೋಟಾರು ನಿರೀಕ್ಷಕರು ಕೋರಮಂಗಲ, ಎ.ಎನ್.ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಬಳ್ಳಾರಿ ಇವರ ಮನೆಯಲ್ಲಿ ಚಿನ್ನಾಭರಣ,ನಗದು ಮಹತ್ವದ ದಾಖಲೆಗಳು ಸಿಕ್ಕಿವೆ.


Spread the love

About Karnataka Junction

[ajax_load_more]

Check Also

ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

Leave a Reply

error: Content is protected !!