ಹುಬ್ಬಳ್ಳಿ: ಬಕ್ರೀದ್ ಹಿನ್ನೆಲೆಯಲ್ಲಿ ಇಲ್ಲಿನ ಕಾರವಾರ ರಸ್ತೆ ಸೇತುವೆ ಬಳಿ ಅಕ್ರಮವಾಗಿ ಗೋಸಾಗಣೆ ಮಾಡುತ್ತಿದ್ದ ಇಬ್ಬರನ್ನು ಭಾನುವಾರ ತಡರಾತ್ರಿ ಬಂಧಿಸಿರುವ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು, 9 ಗೋವುಗಳ ರಕ್ಷಣೆ ಮಾಡಿದ್ದಾರೆ. ಎರಡು ಬೊಲೆರೊ ಪಿಕ್ ಅಪ್ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಹಳೇ ಹುಬ್ಬಳ್ಳಿಯ ರಫೀಕ ಪಠಾಣ ಹಾಗೂ ಅಸ್ಲಂ ಪಟೇಲಬಂಧಿತರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಎರಡು ಬೊಲೆರೊ ಗೂಡ್ಸ್ ವಾಹನಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದರು. ಕಲಘಟಗಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
