ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

Spread the love

ψಬೆಂಗಳೂರು; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ರಾಜಭವನದ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು.
ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು.
ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.
ಮೂವತ್ತನೆ ಮುಖ್ಯಮಂತ್ರಿ ಯಾಗಿ ಬಸವರಾಜ ಬೊmಮ್ಮಾಯಿ ಅಧಿಕಾರ ಸ್ವೀಕರಿಸಿದರು.


Spread the love

Leave a Reply

error: Content is protected !!