Breaking News

ಕೇಶವ ಕುಂಜದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ, ಶೆಟ್ಟರ್ ಮನವೊಲಿಕೆಗೆ ಮುಂದಾದ ಪ್ರಮುಖರು

Spread the love

ಹುಬ್ಬಳ್ಳಿ: ಮಾಜಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಬೊಮ್ಮಾಯಿ‌ ಅವರ ಸಚಿವ ಸಂಪುಟದಲ್ಲಿ ನಾನು ಸೇರ್ಪಡೆಯಾಗುವುದಿಲ್ಲ ಎಂಬ ನಿರ್ಧಾರ ಬಳಿಕ ಸಾಕಷ್ಟು ರಾಜಕೀಯ ಬೆಳವಣಿಗೆ ಆಗುತ್ತಿವೆ.
ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಗೋಕುಲ ರಸ್ತೆಯ ವಿಮಾನ ನಿಲ್ದಾಣದಲ್ಲಿ ಆಗಮಿಸಿದಾಗ ಸಹ ಅಷ್ಟೊಂದು ಲವಲವಿಕೆಯಿಂದರಲಿಲ್ಲ.
ಈಗ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತ್ತಿದ್ದು ಒಂದು ಕಡೆ ನಗರದ ಗೋಕುಲ ಕೇಶವ ಕುಂಜದಲ್ಲಿ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಭೇಟಿ ನೀಡಿ ಆರ್ ಎಸ್ ಎಸ್ ಪ್ರಮುಖರ ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದರು. ನಂತರ ಸಂಜೆ ಮಾಜಿ ಮುಖ್ಯಮಂತ್ರಿಳಾದ ಜಗದೀಶ್ ಶೆಟ್ಟರ್ ಸಹ ಕೇಶವ ಕುಂಜಕ್ಕೆ ಭೇಟಿ ಅಲ್ಲಿನ ಪ್ರಮುಖರ ಜೊತೆಗೆ ಸಭೆ ನಡೆಸಿದ್ದು ಸಾಕಷ್ಟು ರಾಜಕೀಯ ವಿದ್ಯಮಾನಗಳಿಗೆ ಪುಷ್ಟಿ ನೀಡುತ್ತಿದೆ. ಆದರೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು
ಶೆಟ್ಟರ್ ನಿವಾಸಕ್ಕೆ ತೆರಳಿ ಮಾತುಕತೆ ನಡೆಸುವವರಿದ್ದರು ಸಮಯದ ಅಭಾವದಿಂದ ಕೊನೆಯ ಕ್ಷಣದಲ್ಲಿ ರದ್ದು ಮಾಡಲಾಯಿತು.
ಶೆಟ್ಟರ್ ಅವರು ಇಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರು ಮಾತನಾಡಿಸಲು ಮುಂದಾದಾಗ ಕೂಡಾ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದಕ್ಕೆ ತೆರಳಿದರು.
ಜಗದೀಶ್ ಶೆಟ್ಟರ್ ಅವರಿಗೆ ಬೊಮ್ಮಾಯಿ ಸಿಎಂ ಅಗಿದ್ದು ಬೇಸರ ತಂದಿದೆಯಾ ಎಂಬ ಬಗ್ಗೆ ಅನುಮಾನ ಮೂಡಿದ್ದು ಸಂದೇಹವಿಲ್ಲ.ಈ ನಡುವೆ ಹುಬ್ಬಳ್ಳಿಯಲ್ಲಿ ಈ ಕುರಿತು ಬೆಳಿಗ್ಗೆ ಸಹ ಶೆಟ್ಟರ್ ನಿರ್ಧಾರ ಕುರಿತು ಪ್ರತಿಕ್ರಿಯಿಸಿ ಶೆಟ್ಟರ್ ನನ್ನ ಸ್ನೇಹಿತರು ಅವರ ಜೊತೆ ಮಾತನಾಡುತ್ತೇನೆ ಎಂದಿದ್ದರು.‌ ಆದರೆ ಈ ನಡುವೆ ಜಗದೀಶ್ ಶೆಟ್ಟರ್ ಮತ್ತೆ ಪ್ರತಿಕ್ರಿಯೆ ನೀಡಿದ್ದು ನಾನು ಶಾಸಕನಾಗಿ ಮುಂದುವರುತ್ತೇನೆ. ಸ್ವಾಭಿಮಾನ ನನಗೂ ಇದೆ ಎಂದರು.


Spread the love

About Karnataka Junction

    Check Also

    ಅಹಿಂದ ಮಾಡಿದಾಗ ಸಿದ್ಧರಾಮಯ್ಯಾ ಜೊತೆಗೆ ನಿಂತವನು ನಾನೋಬ್ಬನೇ- ಬೊಮ್ಮಾಯಿ

    Spread the loveಹುಬ್ಬಳ್ಳಿ:ಸಿದ್ದರಾಮಯ್ಯ ಅವರು ಅಹಿಂದ ಮಾಡಿದಾಗ ಅವರ ಜೊತೆಗೆ ಬಹಿರಂಗವಾಗಿ ಗಟ್ಟಿಯಾಗಿ ನಿಂತ ವೀರಶೈವ ಸಮುದಾಯದ ನಾಯಕ ನಾನೊಬ್ಬನೇ. …

    Leave a Reply

    error: Content is protected !!