Breaking News

ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ‌ಸೇರ್ಪಡೆ

Spread the love

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಆರ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇಂದು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ‌ಸೇರ್ಪಡೆಯಾದರು.
ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.


Spread the love

About Karnataka Junction

[ajax_load_more]

Check Also

ಕರ್ನಾಟಕ ರೈಲ್ವೆಗೆ ಕೇಂದ್ರ ಸರ್ಕಾರದಿಂದ ಯುಪಿಎ ಅವಧಿಗಿಂತ 9 ಪಟ್ಟು ಹೆಚ್ಚಿನ ಬಜೆಟ್*

Spread the love*- ಯುಪಿಎ ಸರ್ಕಾರ 5 ವರ್ಷದಲ್ಲಿ ವಾರ್ಷಿಕ 835 ಕೋಟಿ ನೀಡಿದ್ದರೆ; ಮೋದಿ ಸರ್ಕಾರದಿಂದ ಪ್ರಸ್ತುತ ಬಜೆಟ್ …

Leave a Reply

error: Content is protected !!