ಕೂಡಲೇ ಸಚಿವ ಸಂಪುಟ ರಚಿಸಲಿ- ಮಾಜಿ ಸಿಎಂ ಸಿದ್ದರಾಮಯ್ಯಾ

Spread the love

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೂಡಲೇ ಸಚಿವ ಸಂಪುಟ ರಚಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ತಿಂಗಳು ಕಳೆದ ನಂತರ ಸಚಿವ ಸಂಪುಟ ರಚನೆಯಾಗಿತ್ತು. ಇದೀಗ ಅದೇ ಸ್ಥಿತಿ ಮುರುಕಳಿಸದಿರಲಿ. ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನರಿಗೆ ಸ್ಪಂದಿಸಲು ಮಂತ್ರಿ ಮಂಡಲದ ಅವಶ್ಯಕತೆಯಿದೆ ಎಂದರು.
ಕೊರೋನಾ ಹಾಗೂ ಪ್ರವಾಹ ಸಮಸ್ಯೆಗೆ ಸ್ಪಂದಿಸಬೇಕಿದ್ದ ಶಾಸಕರು ಬೆಂಗಳೂರಿನಲ್ಲಿ ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಕುರ್ಚಿಗಾಗಿ ಗುದ್ದಾಡುವುದನ್ನು ಬಿಟ್ಟು ಜನರ ನೆರವಿಗೆ ಧಾವಿಸಬೇಕು ಎಂದರು.
ಕೊರೋನಾ ೩ನೇ ಅಲೆ ತಡೆಗಟ್ಟಲು ಸರ್ಕಾರ ಗಟ್ಟಿ ನಿರ್ಧಾರ ಕೈಗೊಳ್ಳಬೇಕು. ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವವರ ಮೇಲೆ ನಿಗಾವಹಿಸಬೇಕು. ಸದಾ ಎಲ್ಲದರಲ್ಲೂ ವಿಫಲವಾಗಿರುವ ಬಿಜೆಪಿ ಸರ್ಕಾರ ಮುಂಜಾಗ್ರತೆ ಕ್ರಮ ಕೈಗೊಳ್ಳದಿದ್ದರೆ ಕೊರೋನಾ ಹೆಚ್ಚಾಗಲಿದೆ ಎಂದರು.
ಕಾಂಗ್ರೆಸ್ ಅಕಾರಕ್ಕೆ ಬರುವುದು ನಿಶ್ಚಿಯವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಸಂಖ್ಯೆ ಹೆಚ್ಚಳದಿಂದ ಗೊಂದಲ ಉಂಟಾಗಿರಬಹುದು ಪಕ್ಷದ ವೇದಿಕೆಯಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಅಲಿಸಲಿದ್ದೇನೆ. ಸೂಕ್ತ ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಲಿದ್ದೇನೆ ಎಂದರು.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply