ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಹುಬ್ಬಳ್ಳಿ ನೈರುತ್ಯ ವಲಯ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆ

Spread the love

ಹುಬ್ಬಳ್ಳಿ: ಇಲ್ಲಿನ ಕಾರಾಗೃಹದಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು ಸೇರಿ ಕುರಿಗಾಹಿಗಳನ್ನು ಕೊಲೆ ಮಾಡಿದ್ದರು.
ಈ ಹಿನ್ನೆಲೆಯಲ್ಲಿ 2014 ರಿಂದ ಇಲ್ಲಿನ ಉಪಕಾರಾಗೃದಲ್ಲಿದ್ದ ವಿಜಯಾನಂದ ಆಗಸ್ಟ್ 1 ರಂದು ಅಲ್ಲಿಂದ ಪರಾರಿಯಾಗಿದ್ದ. ಹೈಕೋರ್ಟ್ ನಲ್ಲಿ ಹಾಕಿದ್ದ ಬೆಲ್ ವಜಾ ಆದ ಹಿನ್ನೆಲೆಯಲ್ಲಿ ಭಯಗೊಂಡು ತಪ್ಪಿಸಿಕೊಂಡು ಹೋಗಿ ಅಣ್ಣಿಗೇರಿಗೆ ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದ. ನಂತರ ಏಕಾಏಕಿ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿ ಬಳಿ ಶವ ಪತ್ತೆಯಾಗಿದೆ.


Spread the love

Leave a Reply

error: Content is protected !!