ಬೆಂಗಳೂರು: ಕಾಂಗ್ರೆಸ್ ಶಾಸಕ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ.
ಶಾಸಕ ಜಮೀರ್ ಅಹ್ಮದ್ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆದಿದ್ದು,ಪೊಲೀಸ್ ಭದ್ರತೆಯಲ್ಲಿ ದಾಳಿ ಮಾಡಲಾಗಿದೆ.
ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ
ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಐಟಿ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ
ಶಾಸಕ ಜಮೀರ್ ಅಹ್ಮದ್ ಖಾನ್ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಮೀರ್ ತಮ್ಮ ಪುತ್ರಿಯ ವಿವಾಹ ಮಹೋತ್ಸವ ನೆರವೇರಿಸಿದ್ದರು.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …