Breaking News

ಸಚಿವ ಸಂಪುಟ ರಚನೆ ಹಿಂದೆಯೇ ಐಎಎಸ್​ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು: ನೂತನ ಸಚಿವ ಸಂಪುಟ ರಚನೆ‌ ಆಗುತ್ತಿದ್ದಂತೆಯೇ ರಾಜ್ಯದ ಪ್ರಮುಖ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಮಣ ರೆಡ್ಡಿಯವರನ್ನು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಐಟಿಬಿಟಿ ಇಲಾಖೆಯ ಹೊಣೆಯನ್ನೂ ನೀಡಲಾಗಿದೆ.ಮಂಜುನಾಥ್ ಪ್ರಸಾದ್​ರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅದರ ಜೊತೆಗೆ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಹೊಣೆಯನ್ನೂ ನೀಡಲಾಗಿದೆ.ರಾಜ್‌ಕುಮಾರ್ ಖತ್ರಿಯವರನ್ನು ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜಾವೇದ್ ಅಖ್ತರ್ ಅವರನ್ನು ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆ ಹೊರಲಿದ್ದಾರೆ.ತುಷಾರ್ ಗಿರಿನಾಥ್​ರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ವಿಪತ್ತು ನಿರ್ವಹಣೆ, ಭೂಮಿಯ ಹೆಚ್ಚುವರಿ ಹೊಣೆಯನ್ನು ನಿಭಾಯಿಸಲಿದ್ದಾರೆ.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!