ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು

Spread the love

ಹುಬ್ಬಳ್ಳಿ; ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯಕ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಲಾಗಿದೆ. ಸಿಬಿಐ ವಿನಯ್ ಕುಲಕರ್ಣಿ ಬಂಧಿಸಿತ್ತು.
ಬುಧವಾರ ಸುಪ್ರೀಂಕೋರ್ಟ್ ಮಾಜಿ ಸಚಿವ, ಕಾಂಗ್ರಸ್ ನಾಯಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಿ ಜಾಮೀಜು ಮಂಜೂರು ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು. ಆದ್ದರಿಂದ ಅವರು ಜಾಮೀನು ಪಡೆಯಲು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಜಾಮೀನು ನೀಡಬಾರದು ಎಂದು ಸಿಬಿಐ ಆಕ್ಷೇಪಣೆಯನ್ನು ಸಲ್ಲಿಸಿತ್ತು.


Spread the love

Leave a Reply

error: Content is protected !!