ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಕ್ಷದ ಆದೇಶ ಪಾಲಿಸುತ್ತೇವೆ. ಆದರೆ 2023ಕ್ಕೆ ಇನ್ನೂ ಕಾಲವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ
ಪಾಲಿಕೆ ಚುನಾವಣೆಯಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಿಡಿದ್ದಾರೆ ಎಂದು ಶಾ ಹೇಳಿದ್ದಾರೆ. ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇವೆ ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 60 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ಪತ್ನಿ ಹಾಗೂ ಪುತ್ರನೊಂದಿಗೆ ಆಗಮಿಸಿ ಜಗದೀಶ ಶೆಟ್ಟರ್ ಅವರು ಮತದಾನ ಮಾಡಿದರು.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …