ಅಖಿಲ ಭಾರತ ಹಿಂದೂ ಮಹಾಸಭಾದ ರಾ,ಪ್ರ ಕಾರ್ಯದರ್ಶಿ ಧರ್ಮೇಂದ್ರ ಬರ್ಕೆ ಬಂಧನ
Karnataka Junction
September 23, 2022
ಮುಖ್ಯಾಂಶ
150 Views
- ಮಂಗಳೂರು: ಮುಖ್ಯಮಂತ್ರಿಯವರಿಗೆ ಕೊಲೆ ಬೆದರಿಕೆಯೊಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಮಹಾಸಭಾದ ಧರ್ಮೇಂದ್ರ ವಿರುದ್ಧ ದೂರು ಶನಿವಾರ ಖಾಸಗಿ ಹೋಟೆಲ್ವೊಂದರಲ್ಲಿ ಮೈಸೂರಿನಲ್ಲಿ ದೇವಾಲಯ ಕೆಡವಿರುವ ವಿಚಾರದ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು, “ಗಾಂಧೀಜಿಯವರನ್ನು ಹತ್ಯೆ ಮಾಡಲು ಸಾಧ್ಯವಾಗುತ್ತದೆ ಎಂದ ಮೇಲೆ ನಿಮ್ಮ ವಿಚಾರದಲ್ಲಿ ಸಾಧ್ಯವಿಲ್ಲ ಅಂತೀರಾ?” ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಧರ್ಮೇಂದ್ರ ಅವರ ವಿರುದ್ಧ ನಿನ್ನೆ ಲೋಹಿತ್ ಕುಮಾರ್ ಸುವರ್ಣ ಅವರು ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಅದರ ಬೆನ್ನಲ್ಲೇ ಧರ್ಮೇಂದ್ರ ಅವರು ವಿಡಿಯೋ ಮಾಡಿ ಕ್ಷಮೆ ಯಾಚನೆ ಮಾಡಿದ್ದರು. ಸದ್ಯ ಬರ್ಕೆ ಠಾಣೆಯ ಪೊಲೀಸರು ಧರ್ಮೇಂದ್ರ ಅವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.
Posts Views: 59