https://youtu.be/uyI2y2Ko3Jw
ಹುಬ್ಬಳ್ಳಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಮ್ಮಸರ್ವಸಮ್ಮತ ನಾಯಕ. ಅವರ ನೇತೃತ್ವದಲ್ಲಿ ಸರ್ಕಾರ ಇನ್ನೂ ಎರಡು ವರ್ಷ ಸರ್ಕಾರ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಎಲ್ಲರಿಗೂ ಯಡಿಯೂರಪ್ಪ ಅವರೇ ನಮ್ಮ ನಾಯಕ ಅಂತ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹೇಳಿದ್ದಾರೆ. ಸಿಎಂ ಬದಲಾವಣೆ ಇನ್ನು ಮುಂದೆ ಅಪ್ರಸ್ತುತ ಎಂದರು.
ಸಹಿ ಸಂಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷರು ಹೇಳಿದ್ದಾರೆ. ಆ ಬಗ್ಗೆ ಹೆಚ್ಚೇನು ಹೇಳುವುದಿಲ್ಲ. ರೇಣುಕಾಚಾರ್ಯ ಅವರು ಸಹಿ ಸಂಗ್ರಹದ ಬಗ್ಗೆ ಹೇಳಿದ್ದರೆ ಅವರನೇ ಕೇಳಿ ಎಂದು ಹೇಳಿ ಮುಂದೆ ತೆರಳಿದರು.