ಭಜರಂಗದಳ ಕಾರ್ಯಕರ್ತನ ಕೊಲೆ

Spread the love

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ನಡುರಾತ್ರಿಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾ ಗಿದ್ದಾರೆ.ಭಜರಂಗದಳದ ಕಾರ್ಯಕರ್ತ ಹರ್ಷಭಜರಂಗದಳದ ಕಾರ್ಯಕರ್ತ ಹರ್ಷಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆಸೀಗೆಹಟ್ಟಿಯಲ್ಲಿ ಕಲ್ಲು ತೂರಾಟ‌: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲೆಯಲ್ಲಿ ಬಿಗುವಿನ ವಾತಾವರಣವಿದೆ. ಸೀಗೆಹಟ್ಟಿ‌ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್​ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿ‌ನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


Spread the love

About Karnataka Junction

    Check Also

    ಭಾರೀ ಮಳೆಗೆ ಹಲವಾರು ಅವಾಂತರ, 24 ಬೈಕ್ ನೀರಿನಲ್ಲಿ

    Spread the loveಭಾರೀ ಮಳೆಗೆ ಹಲವಾರು ಅವಾಂತರ, 24 ಬೈಕ್ ನೀರಿನಲ್ಲಿ ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ …

    Leave a Reply

    error: Content is protected !!