ಹುಬ್ಬಳ್ಳಿ; ಪ್ರಸಕ್ತ
ಸಾಲಿನ ಆಯವ್ಯಯದಲ್ಲಿ ಮುಖ್ಯ ಮಂತ್ರಿಗಳು ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಿಂದ 2021-22 ನೆ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ
ಉದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಿರುವುದು ಸ್ವಾಗತ ಎಂದು ಗ್ರಾಮದ ವಿಶ್ವ ಗುರು ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀದೇವಿ ನಾಯಕರ ಹರ್ಷ ವ್ಯಕ್ತ ಪಡಿಸಿದ್ದಾರೆ.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದು,
93 ತಾಲೂಕಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಹಾಗೂ 102 ತಾಲೂಕುಗಳಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಿಸಲು ಒಟ್ಟು 3000 ಕೋ.ರೂ ಮೊತ್ತದ ಫಲಿತಾಂಶ ಕೇಂದ್ರಿತ ಪ್ರಯತ್ನ ಮಾಡಿ ಮುಂದಿನ 2 ವರ್ಷಗಳಲ್ಲಿ ಒಂದು ಸಾವಿರ ಗ್ರಾಮ ಪಂಚಾಯಿತಿಗಳನ್ನು ಸಂಪೂರ್ಣ ಸಾಕ್ಷರ ಗ್ರಾಮ ಪಂಚಾಯಿತಿಗಳನ್ನಾಗಿ ಮಾಡಲು ಉದ್ದೇಶಿಸಿರುವ ಕ್ರಮ ಒಳ್ಳೆಯದು. ರಾಜ್ಯಾದ್ಯಂತ ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸುತ್ತಿರುವುದು ಸಹ ಓದುಗರಿಗೆ ಪ್ರೋತ್ಸಾಹ ನೀಡಿ ಅವರ ಸಂಖ್ಯೆ ಹೆಚ್ಚಿಸಿದಂತಾಗಿದೆ.
ಶಿಕ್ಷಕ ಹಾಗೂ ಶಿಕ್ಷಕಿಯರುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಮಹಿಳಾ ಧೀಮಂತಿಕೆಯ ದ್ಯೋತಕರಾದ ಶ್ರೀಮತಿ ಸಾವಿತ್ರಿಬಾಯಿ ಫುಲೆಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುವ ಯೋಜನೆ ರೂಪಿಸುತ್ತಿರುವುದು ನಿಜಕ್ಕೂ ಶಿಕ್ಷಣದ ಮೇಲಿನ ತಮ್ಮ ಆಸಕ್ತಿಯನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮೂಲಕ ವ್ಯಕಪಡಿಸಿದ್ದಾರೆ ಎಂದರು.
