ಜೆ.ಪಿ. ನಡ್ಡಾ ಭೇಟಿ ಪಕ್ಷದ ಸಂಘಟನೆಗಾಗಿ

Spread the love

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಆಗಿದ್ದು ವೈಯಕ್ತಿಕ ಕಾರಣಕ್ಕಾಗಿ. ಕೆಲ ಸಂಘಟನೆಯ ಕುರಿತು ಚರ್ಚೆ ಮಾಡಿದ್ದೇವೆ ಹೊರತು ಯಾವುದೇ ಸ್ಥಾನಮಾನಕ್ಕಾಗಿ ಅಲ್ಲ
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದಲ್ಲಿ ತಮ್ಮನ್ನ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,
ಸಚಿವ ಸಂಪುಟ ವಿಸ್ತರಣೆ, ಪುನಾರಚನೆಯ ವೇಳೆ ನಾನು ಸಚಿವಾಕಾಂಕ್ಷಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಯಡಿಯೂರಪ್ಪ ತಮ್ಮ ಪುತ್ರನಿಗೆ ಸಚಿವ ಸ್ಥಾನಕ್ಕೆ ಕೊಡಿಸಲು ಒತ್ತಡ ಮಾಡುತ್ತಿದ್ದಾರೆ ಎನ್ನುವುದು ಸತ್ಯಕ್ಕೆ ದೂರ ಎಂದು
ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ವರಲ್ಲಿ ಬಿಜೆಪಿ ಜಯ ಸಾಧಿಸಿದೆ. ಕರ್ನಾಟಕದ ಮುಂದಿನ ಚುನಾವಣೆಯಲ್ಲಿ ಸಹ ಗೆಲ್ಲಲಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಜನಪರ ಬಜೆಟ್, ಪ್ರಧಾನಿ ಮೋದಿ ಕಾರ್ಯಕ್ರಮದ ಶಕ್ತಿ ಇಟ್ಟುಕೊಂಡು ಚುನಾವಣೆ ಎದುರಿಸಲಿದ್ದೇವೆ. ಕಾಂಗ್ರೆಸ್ ಗೆ ಪಂಚ ರಾಜ್ಯಗಳ ಫಲಿತಾಂಶ ನಿದ್ದೆಗೆಡಿಸಿದೆ. ಇದು ಬಿಜೆಪಿ ಕಾರ್ಯಕರ್ತರಿಗೆ ಆನೆಬಲ ತುಂಬಿದೆ ಎಂದರು.
ಕಾಂಗ್ರೆಸ್ ಗೆ ಯುವಕರು ಹೋಗುತ್ತಿಲ್ಲ. ಅವರ ಸದಸ್ಯತ್ವ ನೋಂದಣಿಗೆ ಹಿನ್ನಡೆ ಆಗುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರೇ ಯುವ ಸಮಾವೇಶದಲ್ಲಿ ಹೇಳಿದ್ದಾರೆ. ಯುವ ಸಮೂಹ ಮೋದಿ ಅವರ ಕಾರ್ಯಕ್ರಮ ನೋಡಿ ಬಿಜೆಪಿಗೆ ಹರಿದುಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟ ಆಗುವುದರಲ್ಲಿ ಎರಡು ಮಾತಿಲ್ಲ.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply