ಬೆಂಗಳೂರು: ಕಾಲೇಜುಗಳಲ್ಲಿ ಯಾಯ ಧರ್ಮದ ಗುರುತುವುಳ್ಳ ಸಮವಸ್ತ್ರ ಧರಿಸಬಾರದು ಕಡ್ಡಾಯವಾಗಿ ಆಯಾ ಕಾಲೇಜು ನಿಗದಿ ಮಾಡಿದ ಸಮವಸ್ತ್ರ ಮಾತ್ರ ಧರಿಸುವಂತೆ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.
ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿ ಬರದಂತೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ಹೈಕೋರ್ಟ್ ತೀರ್ಪು ಹೊರಬಿದಿದ್ದೆ.
ತರಗತಿಗೆ ಹಿಜಾಬ್ ಧರಿಸಿ ಬಾರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಫೆಬ್ರವರಿ 25ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು.
