ಹಿಜಾಬ್‌ ನಿಷೇಧದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ ನಿರಾಕರಣೆ

Spread the love

ನವದೆಹಲಿ: ಹೋಳಿ ರಜೆ ನಂತರ ವಿಚಾರಣೆಗೆ ಸಂಬಂಧಿಸಿದ ಅರ್ಜಿಗಳ ಪಟ್ಟಿಯನ್ನು ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದ್ದು, ಹಿಜಾಬ್‌ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಯನ್ನು ಅದು ನಿರಾಕರಿಸಿದೆ.
ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು, ಹಿಜಾಬ್‌ ನಿಷೇಧದ ವಿಷಯವನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಮನವಿ ಮಾಡಿದರು. ಆದರೆ, ಕೋರ್ಟ್‌ ಹೋಳಿ ರಜೆಯ ನಂತರ ವಿಚಾರಣೆಗೆ ಸಂಬಂಧಿಸಿದ ಅರ್ಜಿಗಳ ಪಟ್ಟಿಯನ್ನು ಪರಿಗಣಿಸುತ್ತೇವೆ ಎಂದಿದೆ.ಹಿಜಾಬ್‌ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದಿದ್ದ ರಾಜ್ಯದ ಹೈಕೋರ್ಟ್‌ ಶಾಲಾ – ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply