ಹುಬ್ಬಳ್ಳಿ: ತಾಲ್ಲೂಕಿನ ಶಿರಗುಪ್ಪಿಯ ಚನ್ನಬಸವಯ್ಯ ಹಿರೇಮಠ (29) ಅವರು ನವಲೂರು ರೈಲು ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಮರಣ ಪತ್ರ ಸಿಕ್ಕಿದ್ದು, ಅದರಲ್ಲಿ ತನ್ನ ಸಾವಿಗೆ ಮೂವರು ವ್ಯಕ್ತಿಗಳು ಕಾರಣರಾಗಿದ್ದಾರೆ ಎಂದು ಹಿರೇಮಠ ಅವರು ಆರೋಪಿಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
