Breaking News

ಭವಿಷ್ಯಕ್ಕಾಗಿ ಸಾಂಪ್ರದಾಯಕ್ಕೆ ತಿಲಾಂಜಲಿ…

Spread the love

ಮಂಡ್ಯ : ಬಾಲ್ಯ ವಿವಾಹ ಬಳಿಕ ತಾಳಿ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕಳುಹಿಸಿದ ಘಟನೆ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮಾರ್ಚ್ 27ರಂದು ಮನೆಯಲ್ಲೇ ಗುಟ್ಟಾಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಗೆ ಕೆಆರ್‌ಪೇಟೆ ತಾಲೂಕಿನ ಯುವಕನೊಂದಿಗೆ ಮದುವೆ ನಡೆದಿದೆ.
ಮಾರ್ಚ್​​ 28ರಂದು ಬಾಲಕಿಯ ಪೋಷಕರು ತಾಳಿ, ಕಾಲುಂಗುರ ಬಿಚ್ಚಿಸಿಕೊಂಡು ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋದಾಗ ವಿದ್ಯಾರ್ಥಿನಿ ಸ್ನೇಹಿತೆ ಬಳಿ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿ ಮಂಡ್ಯದ ಬಾಲ ಮಂದಿರದಲ್ಲಿದ್ದಾಳೆ.ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಲಾಗಿದೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಂಡ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರೆಂದು ತಿಳಿದು ಬಂದಿದೆ.
ಬಾಲ್ಯ ವಿವಾಹದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಮನೆಗೆ ಭೇಟಿ ನೀಡಿ ಅಧಿಕಾರಿಗಳು ವಾರ್ನಿಂಗ್ ನೀಡಿದ್ದರು. ಮಾರ್ಚ್ 18 ಮತ್ತು 25ರಂದು ಅಧಿಕಾರಿಗಳು ಬಾಲಕಿಯ ಮನೆಗೆ ಭೇಟಿ ನೀಡಿದ್ದರು. ಆದರೆ, ಅಧಿಕಾರಿಗಳ ಎಚ್ಚರಿಕೆಗೂ ಬಗ್ಗದ ವಿದ್ಯಾರ್ಥಿನಿಯರ ಪೋಷಕರು ಮಾರ್ಚ್​ 27ರಂದು ರಹಸ್ಯವಾಗಿ ವಿವಾಹ ಮಾಡಿದ್ದಾರೆ.


Spread the love

About Karnataka Junction

[ajax_load_more]

Check Also

ಎಂ ಆರ್ ಸಿ ವಾರಿಯರ್ಸ್ ತಂಡ ಚಾಂಪಿಯನ್

Spread the loveಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ ಹಾಗೂ ವಿ ಎ ಕೆ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಹುಬ್ಬಳ್ಳಿಯ …

Leave a Reply

error: Content is protected !!