ಮುಂಬೈ: ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು, ಒಂದು ವೇಳೆ ಧ್ವನಿವರ್ಧಕಗಳನ್ನು ತೆಗೆಯದಿದ್ದರೆ, ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ಇಟ್ಟು ಹನುಮಾನ್ ಚಾಲೀಸಾ ನುಡಿಸುವ ಎಚ್ಚರಿಕೆ ನೀಡಿದ್ದಾರೆ.
ಮುಂಬೈನಲ್ಲಿ ಎಂಎನ್‌ಎಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಜ್ ಠಾಕ್ರೆ, ನಾನು ಮಸೀದಿಯಲ್ಲಿ ಮಾಡುವ ಪ್ರಾರ್ಥನೆಗೆ ವಿರೋಧಿಯಲ್ಲ. ಅವರವರ ಮನೆಯಲ್ಲಿಯೂ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಇಟ್ಟು ಹನುಮಾನ್ ಚಾಲೀಸಾ ಹಾಕುತ್ತೇವೆ ಎಂದು ಹೇಳಿದ್ದಾರೆ. ಮುಂಬೈನ ಮುಸ್ಲಿಂ ಪ್ರದೇಶಗಳಲ್ಲಿರುವ ಮದರಸಾಗಳ ಮೇಲೆ ದಾಳಿ ಮಾಡುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ. ಪಾಕಿಸ್ತಾನಿ ಬೆಂಬಲಿಗರು ಈ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಮುಂಬೈ ಪೊಲೀಸರಿಗೆ ಅಲ್ಲಿ ಏನು ನಡೆಯುತ್ತಿದೆ ಎಂದು ತಿಳಿದಿದೆ. ಜನಪ್ರತಿನಿಧಿಗಳು ಅಲ್ಲಿನ ಜನರನ್ನು ಮತ ಬ್ಯಾಂಕ್‌ಗಾಗಿ ಬಳಸುತ್ತಿದ್ದಾರೆ. ಅಂತಹವರಿಗೆ ಆಧಾರ್ ಕಾರ್ಡ್ ಕೂಡಾ ಇರುವುದಿಲ್ಲ. ಆದರೆ ಮತಕ್ಕಾಗಿ ಜನಪ್ರತಿನಿಧಿಗಳು ಅವರಿಗೆ ಆಧಾರ್ ಕಾರ್ಡ್ ನೀಡುತ್ತಾರೆ ಎಂದು ರಾಜ್ ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ.
Check Also
ನನಗಿಂತ ಭರತ್ ಗೆ ಹೆಚ್ಚು ಮತ ನೀಡಿ ಗೆಲ್ಲಸಿ- ಸಂಸದ ಬಸವರಾಜ ಬೊಮ್ಮಾಯಿ ಮನವಿ
Spread the loveಹುಬ್ಬಳ್ಳಿ: ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದಿದ್ದ ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಲ್ಲಿ ಭಾರತೀಯ ಜನತಾ …