Breaking News

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ ಯುವತಿಯರಿಗೆ ಸುವರ್ಣಾವಕಾಶ

Spread the love

ಹುಬ್ಬಳ್ಳಿ : ಜಿಟಿಟಿಸಿಯ ಹುಬ್ಬಳ್ಳಿ ಮತ್ತು ಧಾರವಾಡ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಅಲ್ಪಾವಧಿಯ ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿದೆ.

ಈ ಯೋಜನೆಯಡಿ ಸಿಎನ್ ಸಿ, ಕ್ಯಾಡ್ – ಕ್ಯಾಮ್, ಸಿಎಮ್ ಎಮ್, ಎಲೆಕ್ಟ್ರಿಷಿಯನ್, ವೆಲ್ಡರ್, ಇಂಟರ್ನೆಟ್ ಆಪ್ ಥಿಂಗ್ಸ್ ( ಐಓಟಿ ) ಮತ್ತು ಡಾಟಾ ಎಂಟ್ರಿ ಆಪರೇಟರ್ ವೃತ್ತಿಗಳಲ್ಲಿ ಉಚಿತ ಕೌಶಲ್ಯ ತರಬೇತಿ ನೀಡಲಾಗುವುದು.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ ಪಾಸಾದ 16 ರಿಂದ 40 ವಯೋಮಿತಿಯೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಈ ತರಬೇತಿಗಳನ್ನು ಪಡೆಯಬಹುದು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ . ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುತ್ತದೆ. ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ಸೌಕರ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ತಂತ್ರಜ್ಞರಿಂದ ಆನ್ ಜಾಬ್ ತರಬೇತಿ ನೀಡಲಾಗುವುದು. ಈ ತರಬೇತಿಗಳು ಕೈಗಾರಿಕೆಗಳಲ್ಲಿ ನೇರವಾಗಿ ಕೆಲಸ ಮಾಡಲು ಅನುಕೂಲವಾಗುವಂತೆ ಪಠ್ಯಕ್ರಮ ಹೊಂದಿವೆ. ತರಬೇತಿಗಳು ಏ.13 ರಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಏ. 12ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ.0836-2333159, 8183860552 ಹಾಗೂ 9541491810 ಸಂಪರ್ಕಿಸುವಂತೆ ಜಿಟಿಟಿಸಿ ಪ್ರಾಚಾರ್ಯರಾದ ಮಾರುತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಬಸ್ ದರ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the loveಹುಬ್ಬಳ್ಳಿ: ಸಾರಿಗೆ ಪ್ರಯಾಣ ದರವನ್ನು ಶೇ. 15ರಷ್ಟು ಹೆಚ್ಚಳ ಮಾಡಿದ ಸರ್ಕಾರದ ನಿರ್ಧಾರ ಖಂಡಿಸಿ ಅಖಿಲ ಭಾರತೀಯ …

Leave a Reply

error: Content is protected !!