ಮಂಗಳೂರು : ನಗರದ ಹಂಪನಕಟ್ಟೆಯ ವೆನ್ಲಾಕ್ ಆಸ್ಪತ್ರೆ ಎದುರಿಗೆ ಬಸ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಇಂದು ಮಧ್ಯಾಹ್ನ ಸುರತ್ಕಲ್- ಮಂಗಳೂರು ನಡುವೆ ಸಂಚರಿಸುವ 45 ನಂಬರಿನ ಸಿಟಿ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತ್ತು. ಅಶೆಲ್ ಹೆಸರಿನ ಬಸ್ಸಿಗೆ ಬೈಕೊಂದು ಢಿಕ್ಕಿ ಹೊಡೆದಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಒಬ್ಬರು ಮಹಿಳಾ ಪ್ರಯಾಣಿಕರಿಗೆ ಗಾಯವಾಗಿದ್ದು, ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ತೆರಳಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಘಟನೆಯಲ್ಲಿ ಹೆಚ್ಚಿನ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.
