ಮಾನವೀಯತೆ ಮೆರೆದ ವಿಧಾನ ಪರಿಷತ್ ಸಭಾಪತಿ

Spread the love

ಚಿತ್ರದುರ್ಗ : ಭರಮಸಾಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕುಲಕುಂಟೆ ಗ್ರಾಮದ ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ತೀವ್ರವಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿ ಅವರ ಜೀವ ರಕ್ಷಿಸುವಲ್ಲಿ ನೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಬಳಿಕ ಎಪ್ರೀಲ್ 11 ರಿಂದ 14 ರ ವರೆಗೆ ಆಸ್ಸಾಮ್ ರಾಜ್ಯದ ಗೌಹಾಟಿಯಲ್ಲಿ ನಡೆಯಲಿರುವ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಭರಮಸಾಗರ ಬಳಿಯ ಕುಲಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಭಾರೀ ರಸ್ತೆ ಅಪಘಾತವನ್ನು ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳನ್ನು ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು.
ಇಡಗುಂಜಿ ದೇವಸ್ಥಾನದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವರದರಾಜ, ಮಂಜುನಾಥ, ನಾಗೇಂದ್ರರಾವ್ ಮತ್ತು ಮೋಹನ್ ಕುಮಾರ ತೀವ್ರವಾಗಿ ಗಾಯಾಗೊಂಡವರಾಗಿದ್ದಾರೆ.

ಸಭಾಪತಿ ಹೊರಟ್ಟಿಯವರು ಕೂಡಲೇ ಸ್ಥಳೀಯ ಪೋಲೀಸರಿಗೆ ಮತ್ತು ಆಸ್ಪತ್ರೆಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಅಂಬುಲನ್ಸ್ ಕರೆಯಿಸಿ ನಾಲ್ಕು ಜನ ಗಾಯಾಳುಗಳಿಗೆ ಚಿಕಿತ್ಸೆ ಕೊಡಸುವಲ್ಲಿ ನೆರವಾಗಿ ಮಾನವೀಯತೆ ಮೆರೆದರು.

ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ಕೊಡಿಸುವಲ್ಲಿ ಶ್ರಮಿಸಿದ ಸಭಾಪತಿಗಳ ಸೇವಾ ಮನೋಭಾವದ ಗುಣ ಅಪಘಾತ ಸ್ಥಳದಲ್ಲಿ ನೆರೆದಿದ್ದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಮಾಧಾನ ತಂದಿತು. ಸಭಾಪತಿ ಶ್ರೀ ಬಸವರಾಜ ಹೊರಟ್ಟಿಯವರು ಸಂವಿಧಾನಾತ್ಮಕವಾಗಿರುವ ದೊಡ್ಡ ಹುದ್ದೆಯಲ್ಲಿದ್ದರೂ ಜನ ಸಾಮಾನ್ಯರ ಕಷ್ಟಗಳಿಗೆ ಕೂಡಲೇ ಪ್ರತಿಸ್ಪಂದಿಸಿ ನೆರವಾಗುವ ಮಾನವೀಯತೆಯ ಗುಣ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.


Spread the love

About gcsteam

    Check Also

    ಐಎನ್​ಐಎಫ್​ಡಿ ಫ್ಯಾಷನ್ ಶೋ 29ರಂದು- ಜ್ಯೋತಿ ಬಿಡಸಾರಿಯಾ

    Spread the loveಹುಬ್ಬಳ್ಳಿ: ನಗರದ ಇಂಟರ್​ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಫ್ಯಾಷನ್ ಡಿಸೈನ್ ವತಿಯಿಂದ 5ನೇ ಆವೃತ್ತಿಯ ಫ್ಯಾಷನ್ ಶೋ ಹಾಗೂ …

    Leave a Reply