ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ಡವಳೇಶ್ವರ ಗ್ರಾಮದಲ್ಲಿ ಮಸಣದ ಜಾಗವನ್ನು ಕೊಳ್ಳೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಾಮಾಜಿಕ ಹೋರಾಟಗಾರ ಕಲ್ಲಪ್ಪ ಕಡಬಲ್ಲವರ ಆರೋಪ ಮಾಡಿದರು. ಇನ್ನೊಂದು ಕೋಮಿನ ಜನ ಈ ಸ್ಮಶಾನದ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಸಾರ್ವಜನಿಕ ರಸ್ತೆಯಲ್ಲಿ ಅಡ್ಡಲಾಗಿ ಗೋಡೆ ನಿರ್ಮಾಣ ಮಾಡಿ ಗಂಭೀರ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಕಲ್ಲಪ್ಪ ಕಡಬಲ್ಲವರ ಆರೋಪಿಸಿದರು. ಇದೇ ವೇಳೆ ಪ್ರವಾಹದಿಂದ ಹಾನಿಗೊಳಗಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.
Check Also
ಹೆಣ್ಣು ಮಕ್ಕಳೇ ಸ್ಟಾಂಗು ಗುರು ಕಾರ್ಯಕ್ರಮ ಸ್ಟಾರ್ ಸುವರ್ಣ ಚಾಲನೆ
Spread the loveಹುಬ್ಬಳ್ಳಿ: ನಗರದ ವಿನೂತನ ಪೌಂಡೇಶನ್ ಹುಬ್ಬಳ್ಳಿ ಅಧ್ಯಕ್ಷರು ಅಕ್ಕಮ್ಮಾ ಕಂಬಳಿ ಮುಂತಾದವರ ನೇತೃತ್ವದಲ್ಲಿ ಹೆಣ್ಣು ಮಕ್ಕಳೇ ಸ್ಟಾಂಗು …