Breaking News

ಡೆತ್ ನೋಟ್ ಕಳಿಸಿ ನಾಪತ್ತೆಯಾಗಿದ್ದ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು

Spread the love

ಉಡುಪಿ: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ವಾಟ್ಸಪ್​ನಲ್ಲಿ ಡೆತ್ ನೋಟ್ ಕಳಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ಸಂತೋಷ್​ ಪಾಟೀಲ್​ ಸದ್ಯ ವಿಜಯನಗರದಲ್ಲಿ ವಾಸವಾಗಿದ್ದರು‌. ಬಿಜೆಪಿ ಸದಸ್ಯರೂ ಆಗಿರುವ ಇವರು ಕೆ.ಎಸ್. ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಈಶ್ವರಪ್ಪನವರ ಮೌಖಿಕ ಆದೇಶದ ಮೇರೆಗೆ ಸಂತೋಷ ಹಿಂಡಲಗಾ ಗ್ರಾಮದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪ ಅವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಡೆತ್‌ನೋಟ್‌ನಲ್ಲಿ ಏನಿದೆ?: ‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ. ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳು ಮತ್ತು ನಮ್ಮ ಹಿರಿಯ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪನವರು ಸಹಾಯಹಸ್ತ ನೀಡಬೇಕೆಂದು ಕೈಮುಗಿದು ಕೇಳಿಕೋಳುತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ಮತ್ತು ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ’ ಎಂದು ಮಾಧ್ಯಮದವರಿಗೆ ಸಂತೋಷ್​ ಕಳಿಸಿದ್ದರೆನ್ನಲಾದ ವಾಟ್ಸಪ್​ನ ಡೆತ್ ನೋಟ್​ನಲ್ಲಿದೆ.
ಡೆತ್ ನೋಟ್ ಬಂದ ತಕ್ಷಣವೇ ಬೆಳಗಾವಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಆಗ ಸಂತೋಷ ಮೊಬೈಲ್ ಉಡುಪಿಯಲ್ಲಿ ಇರುವುದು ಪತ್ತೆಯಾಗಿತ್ತು. ತಕ್ಷಣವೇ ಉಡುಪಿ ಪೊಲೀಸರ ಗಮನಕ್ಕ ತರಲಾಗಿತ್ತು.


Spread the love

About Karnataka Junction

[ajax_load_more]

Check Also

ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.

Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …

Leave a Reply

error: Content is protected !!