ನಾನ್ಯಾಕೆ ರಾಜೀನಾಮೆ ಕೊಡಲಿ- ಕೆಎಸ್ ಈಶ್ವರಪ್ಪ

Spread the love

ಶಿವಮೊಗ್ಗ; ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ ನೋಟ್ ಬರೆದೇ ಇಲ್ಲಾ. ಡೆತ್ ನೋಟ್ ಬರೆದಿದ್ದಾರೆ ಅಂತಾ ಸುಳ್ಳು ಹೇಳತಾ ಇದ್ದಾರೆ. ಆದ್ದರಿಂದ ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜೀನಾಮೆ ನೀಡಲ್ಲ ಅಂತಾ ರಾಜ್ಯ ಭಾರತೀಯ ಜನತಾ ಪಕ್ಷದ ನಾಯಕ ನಳೀನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದರು. 40% ಆರೋಪದ ವಿರುದ್ಧ ನಾನು ಸಂತೋಷ್​​ ವಿರುದ್ಧ ಕೋರ್ಟ್​ನಲ್ಲಿ ಕೇಸ್​ ದಾಖಲಿಸಿದ್ದೆ. ಕೋರ್ಟ್‍ನಿಂದ ನೋಟಿಸ್ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು ನೋಡಿಲ್ಲ. ಅವರು ಯಾರೂ ಎಂದೇ ನನಗೆ ಗೊತ್ತಿಲ್ಲ ಎಂದು ಹೇಳಿದರು. ಉಡುಪಿಯ ಶಾಂಭವಿ ಲಾಡ್ಜ್​​​ನಲ್ಲಿ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬಹಿರಂಗವಾಗುತ್ತಿದ್ದಂತೆ ಅವರು ವಾಟ್ಸ್​​​ಆ್ಯಪ್​​​​ನಲ್ಲಿ ಕಳುಹಿಸಿದ್ದ ಸಂದೇಶ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲಿ ನನ್ನ ಆತ್ಮಹತ್ಯೆಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply