https://youtu.be/JvtjWzq5OIo
ಹುಬ್ಬಳ್ಳಿ,- ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರೂ ಹಾಗೂ ಲೋಕೋಪಯೋಗಿ ಖಾತೆಯ ಮಾಜಿ ಸಚಿವರೂ ಆದ ಸಿ.ಎಂ. ಉದಾಸಿ ಅವರ ನಿಧನಕ್ಕೆ ಬೃಹತ್,ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಿ ಎಂ ಉದಾಸಿ ಅವರು ಲೋಕೋಪಯೋಗಿ ಇಲಾಖಾ ಸಚಿವರಾಗಿದ್ದ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ವಿಶೇಷವಾಗಿ ರಸ್ತೆಗಳು ಮತ್ತು ಸೇತುವೆಗಳ ನಿರ್ಮಾಣ ಮತ್ತು ಸುಧಾರಣೆಗೆ ಕೈಗೊಂಡ ಕ್ರಮಗಳು ಇಂದಿಗೂ ಮಾದರಿಯಾಗಿವೆ.
ಸಿ.ಎಂ. ಉದಾಸಿ ಅವರ ಚೇತನಕ್ಕೆ ಶಾಂತಿ ಸಿಗಲಿ ಹಾಗೂ ಅವರ ಪುತ್ರ ,ಹಾವೇರಿ ಸಂಸದ ಶಿವಕುಮಾರ್ ಉದಾಸಿ ಅವರನ್ನು ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಸಚಿವ ಶೆಟ್ಟರ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.