ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಮಸೀದಿ ಚಿತ್ರದ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ ಮಾಡಿ ವಿವಾದ ಸೃಷ್ಟಿಸಿದ ಎನ್ನಲಾದ ಯುವಕನನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪೋಟೋ ಎಡಿಟ್ ಮಾಡಿ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಮುಂದೆ ನೂರಾರು ಜನ ಸೇರಿದ್ದರು.
ಹುಬ್ಬಳ್ಳಿ ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ ಪೊಲೀಸರು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದಾರೆ. ತಲೆ ಕೆಟ್ಟರೆ ಇಲ್ಲು ಧ್ವಜ ಹಾರಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದೂ-ಮುಸ್ಲಿಂ ಭಾವೈಕ್ಯತೆ ಧಕ್ಕೆ ಉಂಟು ಮಾಡಿ ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಮಾಡಿದ ಬೆನ್ನಲ್ಲೇ ಮುಸ್ಲಿಂ ಸಮುದಾಯದ ಜನರು ಆಕ್ರೋಶಗೊಂಡು ಪೊಲೀಸ್ ಠಾಣೆಯ ಮುಂದೆ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈಗಾಗಲೇ ಬಸ್ , ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಲಾಗಿದೆ. ಕಾನ್ಸ್‌ಟೇಬಲ್ ಗುರುಪಾದಪ್ಪ ಸ್ವಾದಿ, ಪೂರ್ವ ಸಂಚಾರಿ ಇನ್ಸ್ ಪೆಕ್ಟರ್ ಕಾಡದೇವರಮಠ ಮೇಲೆ ಕಲ್ಲು ತೂರಾಟ, ಗಾಯಗೊಂಡಿದ್ದಾರೆ