2023ರ ಚುನಾವಣೆಗೆ ಈಗಿನಿಂದಲೇ ಸಿದ್ಧತೆ- ಮಾಜಿ ಸಿಎಂ ಯಡಿಯೂರಪ್ಪ

Spread the love

ದಾವಣಗೆರೆ: ಅವಧಿಗೂ‌ ಮುನ್ನ ಚುನಾವಣೆ ನಡೆಸುವ ಉದ್ದೇಶವಿಲ್ಲ, 2023 ಚುನಾವಣೆಗೆ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ಬಗ್ಗೆ ಕೇಂದ್ರ‌ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಡಪಡಿಸಿದರು. ದಾವಣಗೆರೆಯಲ್ಲಿ ಮಾತನಾಡಿದ ಅವರು 150 ಸ್ಥಾನಗಳನ್ನು ಚುನಾವಣೆಯಲ್ಲಿ ಗೆಲ್ಲಬೇಕಾದ ಕಾರ್ಯತಂತ್ರಗಳನ್ನ ರೂಪಿಸಲಾಗುತ್ತಿದೆ ಎಂದರು.
ಬಿಜೆಪಿಗೆ ರಾಜ್ಯದಲ್ಲಿ ವಾತಾವರಣ ಚೆನ್ನಾಗಿದೆ. ಒಂದು ವಾರದ ನಂತರ ರಾಜ್ಯ ಪ್ರವಾಸ ಆರಂಭಿಸಲಾಗುವುದು. ಪ್ರತಿ ಜಿಲ್ಲೆಗೂ ಭೇಟಿ ನೀಡುವೆ, ಬೇರೆ ರಾಜ್ಯಗಳಲ್ಲಿ ಆದ ಸ್ಥಿತಿಯೇ ಕಾಂಗ್ರೆಸ್​ಗೆ ನಮ್ಮ ರಾಜ್ಯದಲ್ಲೂ ಆಗುತ್ತದೆ ಎಂದು ಭವಿಷ್ಯ ನುಡಿದರು. ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಬಿಎಸ್​ವೈ ಬೇಜವಾಬ್ದಾರಿತನದ ಹೇಳಿಕೆಗೆ ಏನ್ ಹೇಳೋಕೆ ಆಗುತ್ತದೆ? ಎಂದು ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.


Spread the love

About gcsteam

    Check Also

    ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಗೆ ಮುಖಭಂಗ- ಬಿಜೆಪಿ ವಕ್ತಾರ ರವಿ ನಾಯಕ

    Spread the loveಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕಳೆದ 15 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿ ಅಧಿಕಾರವನ್ನು …

    Leave a Reply