ಹುಬ್ಬಳ್ಳಿ: ವಾಟ್ಸ್ ಆ್ಯಪ್ ನಲ್ಲಿ ವಿವಾದಾತ್ಮಕ ಸ್ಟೇಟಸ್ ಇರಿಸಿ ಕೋಮು ಗಲಭೆಗೆ ಕಾರಣವಾಗಿ ಬಂಧಿತನಾಗಿರುವ ಹಳೆ ಹುಬ್ಬಳ್ಳಿಯ ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪೊಲೀಸರಿಗೆ ಆದೇಶಿಸಿದೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅಭಿಷೇಕ ವಿವಾದಾತ್ಮಕ ಸ್ಟೇಟಸ್ ಇರಿಸಿದ್ದ ಆರೋಪದಡಿ ಏ. 16ರಂದು ಬಂಧಿತನಾಗಿದ್ದ. ಈತನಿಗೆ ಏ. 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಕಾರಾಗೃಹದಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ಕಾರಾಗೃಹ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.
Check Also
ಗಾಂಜಾ ಮಾರುತ್ತಿದ್ದ 12 ಆರೋಪಿಗಳು ಬಂಧನ*. ಕಾರು, ಎರಡು ತಲ್ವಾರ್, ಡ್ರ್ಯಾಗರ್, 10 ಮೊಬೈಲ್ ಪೋನ್‌ಗಳು ವಶ. ಎನ್ ಶಶಿಕುಮಾರ್.
Spread the loveಹುಬ್ಬಳ್ಳಿ: ಇಂದು ನಗರದಲ್ಲಿ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪತ್ರಿಕಾಗೋಷ್ಠಿ ನಡೆಸಿ ಗಾಂಜಾ ಮಾರಾಟ ಮಾಡುವ …