Breaking News

ದಿವ್ಯಾ ಹಾಗರಗಿ ಜೊತೆಗೆ ಐಪಿಎಸ್ ಅಧಿಕಾರಿ ಫೋಟೋ ವೈರಲ್

Spread the love

ಬೆಂಗಳೂರು; : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಲೆ ಮರೆಸಿಕೊಂಡಿರುವ ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಜತೆ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಕೂತಿರುವ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ದಿವ್ಯಾ ಹಾಗರಗಿ ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಎಂಬುದು ಸಿಐಡಿ ತನಿಖೆಯಲ್ಲಿ ಬಯಲಾಗಿದೆ. ಇದರ ಬೆನ್ನಲ್ಲೇ ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಜತೆ ದಿವ್ಯಾ ಹಾಗರಗಿ ಗುರುತಿಸಿಕೊಂಡಿದ್ದ ಪೋಟೋಗಳು ವೈರಲ್ ಆಗಿದ್ದವು. ಇದೀಗ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ದಿವ್ಯಾ ಹಾಗರಗಿ ರೈಲಿನ ಬರ್ತ್‌ನಲ್ಲಿ ಕೂತಿರುವ ಚಿತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಅದರಲ್ಲೂ ಪೊಲೀಸ್ ಇಲಾಖೆಯ ವಾಟ್ಸ್ ಆ್ಯಪ್ ಗ್ರೂಪ್‌ಗಳಲ್ಲಿ ಈ ಫೋಟೊ ಹರಿದಾಡುತ್ತಿದೆ.
ವ್ಯಕ್ತಿಯೊಬ್ಬ ಸೆಲ್ಫಿ ತೆಗೆದಿದ್ದು, ದಿವ್ಯಾ ಹಾಗರಗಿ ಪಕ್ಕದಲ್ಲಿ ರವಿ ಡಿ ಚನ್ನಣ್ಣನವರ್ ಕೂತು ಹರಟೆ ಹೊಡೆಯುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತೆ ರವಿ ಚನ್ನಣ್ಣನವರ್ ಕೂತಿರುವ ಚಿತ್ರ ಇದೀಗ ಬಹು ಚರ್ಚೆಗೆ ಗ್ರಾಸವಾಗಿದೆ.


Spread the love

About Karnataka Junction

[ajax_load_more]

Check Also

ವಲಯ ಅರಣ್ಯಧಿಕಾರಿ ಸೇವಾಲಾಲ ಮಾಲಾಧಾರಿಗಳು ಅವಾಚ್ಯವಾಗಿ ನಿಂಧಿಸಿದ್ದಾರೆ ಎಂದು ಆರೋಪಿಸಿ: ಮನವಿ

Spread the love ಕಲಘಟಗಿ: ಫೆ. 15 ರಂದು ಜರುಗುವ ಸಂತ ಸೇವಾಲಾಲ ಜಯಂತಿ ಅಂಗವಾಗಿ ಸೇವಾಲಾಲ ಮಾಲಾಧಾರಿಗಳು ಅರಣ್ಯ …

Leave a Reply

error: Content is protected !!