Breaking News

ಏಲಕ್ಕಿಯೊಂದಿಗೆ ಕನ್ನಡದ ಕಂಪು ಸೂಸಲು ಮುಹೂರ್ತ ಫಿಕ್ಸ್

Spread the love

ಬೆಂಗಳೂರು: ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು ಹಾಗೂ ಅವು ಅರ್ಥಪೂರ್ಣವಾಗಿರಬೇಕು. ಸಮಿತಿಗಳಲ್ಲಿ ಸಕ್ರಿಯವಾಗಿರುವ ಸ್ಥಳೀಯ ಜನರನ್ನು ತೊಡಗಿಸಿಕೊಳ್ಳಬೇಕು. ಗೋಷ್ಠಿಗಳಲ್ಲಿಯೂ ಸ್ಥಳೀಯರಿಗೆ ಅವಕಾಶ ನೀಡಬೇಕು. ಎಲ್ಲಾ ತಾಲ್ಲೂಕುಗಳ ಸ್ವಯಂ ಸೇವಕರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು.
ಹಾವೇರಿಯಲ್ಲಿ 86 ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.

ಸೂಕ್ತ ವಸತಿ ವ್ಯವಸ್ಥೆ : ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ವಸತಿ ವ್ಯವಸ್ಥೆಯಾಗಬೇಕು. ಎಲ್ಲಿ, ಎಷ್ಟು ಜನರಿಗೆ ವಸತಿ ವ್ಯವಸ್ಥೆಯಾಗಿದೆ ಎಂಬ ಬಗ್ಗೆ ನಿಖರವಾಗಿ ಯೋಚಿಸಿ. ಹಾಸ್ಟೆಲ್​ಗಳು ಮತ್ತು ಡಾರ್ಮಿಟರಿಗಳನ್ನು ವಸತಿ ಶಾಲೆಗಳನ್ನು ಸದುಪಯೋಗಿಸಿಕೊಳ್ಳಬೇಕು. ಪ್ರಮುಖ ಕಲ್ಯಾಣ ಮಂಟಪಗಳನ್ನು ಗುರುತಿಸಿ. ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿಯೂ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದರು. ಮಾರ್ಗ ಮಧ್ಯೆಯೂ ಉತ್ತಮ ಹೋಟೆಲ್​ಗಳಿವೆ. ಖಾಸಗಿ ಶಾಲೆಗಳನ್ನು ಸಹ ಬಳಕೆ ಮಾಡಿಕೊಳ್ಳಬಹುದು. ತುರ್ತು ಪರಿಸ್ಥಿತಿಗಳಲ್ಲಿ ಬಳಕೆ ಮಾಡಲು ಕುಂಭಮೇಳದಲ್ಲಿ ಆಯೋಜಿಸಿದಂತೆ ಟೆಂಟ್​ಗಳನ್ನು ಉಪಯೋಗಿಸಬಹುದು. ಇವುಗಳ ಬಗ್ಗೆ ಸೂಕ್ತ ನೀಲನಕ್ಷೆ ಸಿದ್ಧಪಡಿಸಲು ತಿಳಿಸಿದ್ದಲ್ಲದೇ, ಊಟ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಯ ಬಗ್ಗೆಯೂ ಸೂಕ್ತ ಯೋಜನೆಗಳನ್ನು ರೂಪಿಸಬೇಕು. ಸಿದ್ಧತೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಮತ್ತೊಂದು ಸಭೆ ಕರೆದು, ಅಂತಿಮಗೊಳಿಸಬೇಕು. ಬಜೆಟ್​ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪರಿಸರ ಸ್ನೇಹಿ ಸಮ್ಮೇಳನ : ಸಮ್ಮೇಳನವನ್ನು ಪರಿಸರಸ್ನೇಹಿಯಾಗಿಸಲು ಫ್ಲೆಕ್ಸ್​ಗಳ ಬಳಕೆಯನ್ನು ನಿಷೇಧಿಸಿ ಜಾಹೀರಾತು ಫಲಕಗಳನ್ನು ಬಳಸುವಂತೆ ಮುಖ್ಯ ಮಂತ್ರಿಗಳು ಸೂಚಿಸಿದರು. ಸಭೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಚಂದ್ರಶೇಖರ್ ಕಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಅರುಣ್ ಕುಮಾರ್ ಪೂಜಾರ್, ನೆಹರು ಒಲೆಕಾರ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಜಿಲ್ಲಾಧಿಕಾರಿ ಡಾ. ಸಂಜಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.


Spread the love

About Karnataka Junction

    Check Also

    ಹಿಂದೂ ಹಬ್ಬಗಳು ಬಂದಾಗ ಮಾತ್ರ ಕಾಂಗ್ರೆಸ್ಸಿಗೆ ಕಾನೂನು ನೆನಪಾಗುತ್ತೆ: ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್

    Spread the loveಬೆಂಗಳೂರು: ಕಾಂಗ್ರೆಸ್‌ನವರಿಗೆ ಹಿಂದೂ ಹಬ್ಬ ಬಂದಾಗ ಮಾತ್ರ ನೀತಿ, ನಿಯಮ, ಕಟ್ಟಳೆಗಳು ನೆನಪಿಗೆ ಬಂದುಬಿಡುತ್ತವೆ! ತಮ್ಮ ಬಾಂಧವರು …

    Leave a Reply

    error: Content is protected !!