Breaking News

ಪ್ರಧಾನಿ ಮೋದಿ ರ್ಯಾಲಿಗೂ ಮುನ್ನ ಭಾರೀ ಸ್ಫೋಟ

Spread the love

ಶ್ರೀನಗರ(ಜಮ್ಮು-ಕಾಶ್ಮೀರ್) : ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರ ಭೇಟಿಗೂ ಮುನ್ನವೇ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಇನ್ನು ಕೆಲವೇ ಗಂಟೆಗಳಲ್ಲಿ, ಪ್ರಧಾನಿ ಮೋದಿ ರ್ಯಾಲಿ ನಡೆಯಲಿರುವ ಪ್ಯಾರಿಷ್ ಗ್ರಾಮದಿಂದ ಕೇವಲ 12 ಕಿಮೀ ದೂರದಲ್ಲಿರುವ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ. ಈ ಸುದ್ದಿಯ ನಂತರ ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿವೆ. ಈ ಶಂಕಿತ ಸ್ಫೋಟ ಬಿಷ್ನಾಹ್‌ನ ಲಾಲಿಯಾನ ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇದಾದ ಬಳಿಕ ಸಾಂಬದ ಪಲ್ಲಿ ಗ್ರಾಮದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ರ್ಯಾಲಿ ನಡೆಯುವ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲಿಸಲಾಗುತ್ತಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್‌ ಅಧಿಕಾರಿಯೊಬ್ಬರು “ಇದು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ತೋರುತ್ತಿಲ್ಲ. ವಿವರಗಳನ್ನು ಕಂಡುಹಿಡಿಯಲಾಗುತ್ತಿದೆ” ಎಂದು ಹೇಳಿದ್ದಾರೆ.


Spread the love

About gcsteam

    Check Also

    25 ಲಕ್ಷ ರೂ.‌ಮೌಲ್ಯದ ಅಕ್ರಮ ಸ್ಪಿರಿಟ್ ವಶ

    Spread the loveಹುಬ್ಬಳ್ಳಿ : ಸಮೀಪದ ಕಲಘಟಗಿ ತಾಲೂಕಿನ ದೇವಿಕೊಪ್ಪ ಬಳಿ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ ಪಡೆದ …

    Leave a Reply